fbpx
ಸಮಾಚಾರ

“ನಾನು ಕೂಡ ಒಬ್ಬ ತಂದೆಯ ಮಗಳು” ಸಂಸದ ಪ್ರತಾಪ್​ ಸಿಂಹಗೆ ಬಾಲಕಿಯ ಭಾವನಾತ್ಮಕ ಪತ್ರ! ಸೋಷಿಯಲ್ ಮೀಡಿಯಾದಲ್ಲಿ ವೈರಲ್

ಪ್ರವಾಸೋದ್ಯಮ ಮತ್ತು ಅಭಿವೃದ್ಧಿ ಹೆಸರಿನಲ್ಲಿ ಜಿಲ್ಲೆಯ ಪರಿಸರದ ಮೇಲೆ ನಡೆಯುತ್ತಿರುವ ಶೋಷಣೆ, ಅದರಿಂದ ಆಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಕೊಡಗಿನ ಪುಟಾಣಿಯೊಬ್ಬಳು ಸಂಸದ ಪ್ರತಾಪ್ ಸಿಂಹ ಅವರಿಗೆ ಬರೆದಿರುವ ಭಾವನಾತ್ಮಕ ಪತ್ರವೊಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಡಿಯರ್ ಪ್ರತಾಪ್ ಅಂಕಲ್…

ನೀವೆನಾ ನಮ್ಮ ಸಂಸದರು.

ಪ್ರವಾಸೋದ್ಯಮ ಎಂಬುದು 2005ರ ತನಕ ಇರಲಿಲ್ಲ. ಆದರೂ ಆಗೆಲ್ಲಾ ನಾವು ಚೆನ್ನಾಗಿಯೇ ಇದ್ದೆವು. ಆದರೆ ಈಗ ನೀವು ಜಾರಿಗೆ ತರಲು ಉದ್ದೇಶಿಸಿರುವ ಯೋಜನೆಗಳು ನಮ್ಮನ್ನು ಸಾಯಿಸುತ್ತಿವೆ. ಎಂದು ಪ್ರಾರಂಭ ಮಾಡಿರುವ ಪತ್ರದಲ್ಲಿ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾಳೆ.

ನೀವು ಒಬ್ಬ ಮಗಳ ತಂದೆ, ನಾನು ಒಬ್ಬ ತಂದೆಯ ಮಗಳು ಎನ್ನುತ್ತಾ ರಾಷ್ಟ್ರೀಯ ಹೆದ್ದಾರಿ ಕೊಡಗಿಗೆ ಬರುವುದರಿಂದ ಜಿಲ್ಲೆಯ ಪರಿಸರಕ್ಕೆ ಮಾರಕವಾಗುತ್ತದೆಯೇ ಹೊರತು ಇಲ್ಲಿನವರಿಗೆ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾಳೆ.

ಶೇ.18ರಷ್ಟು ಮಂದಿ ಪ್ರವಾಸಿಗರಿಗೋಸ್ಕರ ರಾಷ್ಟ್ರೀಯ ಹೆದ್ದಾರಿ ಸೇರಿ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಇದರಿಂದಾಗಿಯೇ ಜಿಲ್ಲೆಯಲ್ಲಿ ಅರಣ್ಯ ನಾಶ ಆಗುತ್ತಿದೆ. ಜಿಲ್ಲೆಯ ಮಳೆಯ ಪ್ರಮಾಣ ಕುಸಿತಕ್ಕೆ ಕಾರಣವಾಗುತ್ತಿದೆ. ವಾರ್ಷಿಕ ಸರಾಸರಿ 220 ಇಂಚು ಮಳೆಯಾಗುತ್ತಿದ್ದಲ್ಲಿ ಈಗ 170 ಇಂಚು ಮಳೆಯಾಗುತ್ತಿದೆ.

ಮಣ್ಣಿನ ಫಲವತ್ತತೆ ನಾಶವಾಗುತ್ತಿದೆ. ಅಪರೂಪದ ಪ್ರಾಣಿ, ಪಕ್ಷಿಗಳು ಕಣ್ಮರೆಯಾಗುತ್ತಿದೆ. ಜಿಲ್ಲೆಯ ಹವಾಮಾನದಲ್ಲಿ ಬದಲಾವಣೆಗಳು ಕಂಡುಬರುತ್ತಿದೆ. ಕೊಡಗು ಪ್ಲಾಸ್ಟಿಕ್‌ ಮಯ ಆಗುತ್ತಿದ್ದು, ಜಿಲ್ಲೆಯ ಶೇ. 82ರಷ್ಟು ಮಂದಿ ಪಶ್ಚಿಮಘಟ್ಟದ ಕಾಡು, ಕಾವೇರಿ ನದಿಯನ್ನು ರಕ್ಷಿಸುವ ವ್ಯವಸಾಯವನ್ನೇ ನಂಬಿಕೊಂಡಿದ್ದಾರೆ ಎಂದಿದ್ದಾಳೆ.

ಜಿಲ್ಲೆಯ ಹವಾಮಾನದಲ್ಲಿ ಬದಲಾವಣೆಗಳು ಕಂಡುಬರುತ್ತಿದೆ. ಕೊಡಗು ಪ್ಲಾಸ್ಟಿಕ್‍ಮಯ ಆಗುತ್ತಿದೆ ಎಂದು ಆತಂಕ ತೋಡಿಕೊಂಡಿದ್ದಾಳೆ. ಜಿಲ್ಲೆಯ ಶೇ. 82ರಷ್ಟು ಮಂದಿ ಪಶ್ಚಿಮಘಟ್ಟದ ಕಾಡು, ಕಾವೇರಿ ನದಿಯನ್ನು ರಕ್ಷಿಸುವ ವ್ಯವಸಾಯವನ್ನೇ ನಂಬಿಕೊಂಡಿದ್ದಾರೆ ಎಂದು ಬಾಲಕಿ ತಿಳಿಸಿದ್ದಾಳೆ.

ಜಿಲ್ಲೆಯ ಪ್ರಮುಖ ಬೆಳೆಗಳಾದ ಕಾಫಿ, ಕರಿಮೆಣಸು ಹಾಗೂ ಭತ್ತದ ಬೇಸಾಯಕ್ಕೆ ಉತ್ತೇಜನ ಕೊಡುವ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿ ಎಂದು ಸಂಸದರಿಗೆ ಮನವಿ ಮಾಡಿದ್ದಾಳೆ. ನಾನು ಮತ್ತು ನಿಮ್ಮ ಮಗಳು ಈಗಲೂ ಕಾವೇರಿ ನೀರು ಕುಡಿಯುತ್ತಿದ್ದೇವೆ. ಜಿಲ್ಲೆಯ ಪರಿಸರಕ್ಕೆ ನೀವು ಹಾನಿ ಮಾಡುವುದಿಲ್ಲವೆಂಬ ಭರವಸೆ ಇದೆ. ಒಂದು ವೇಳೆ ಇಲ್ಲಿಯ ಪರಿಸರ ನಾಶ ಆದರೆ ಮುಂದೆ ನಾವು ಕಣ್ಮರೆಯಾಗುತ್ತೇವೆ. ಮುಂದೆ ನಿಮ್ಮ ಮಗಳು ಕಣ್ಮರೆಯಾದ ಕೊಡಗು ಮತ್ತು ಕೊಡವರು ಎಂಬ ಲೇಖನ ಬರೆಯುತ್ತಾರೆ ಎಂದು ಬಾಲಕಿ ಪತ್ರದಲ್ಲಿ ಹೇಳಿಕೊಂಡಿದ್ದಾಳೆ.

ಪ್ರತಾಪ್‌ ಸಿಂಹ ಪ್ರತಿಕ್ರಿಯೆ
ಬಾಲಕಿಯ ಸಾಮಾಜಿಕ ಕಳಕಳಿಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಮತ್ತೊಂದೆಡೆ ಬಾಲಕಿಯ ಪತ್ರಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಉತ್ತರಿಸಿರುವ ಸಂಸದ ಪ್ರತಾಪ್‌ ಸಿಂಹ, ಪುಟಾಣಿ ರಾಜಕುಮಾರಿ, ನೀನು ಭಾರತದ ಭವಿಷ್ಯ. ಒಬ್ಬ ಜನಸೇವಕನಾಗಿ ನಿನ್ನ ಭವಿಷ್ಯವನ್ನು ಕಾಪಾಡುವುದು ನನ್ನ ಕರ್ತವ್ಯ. ನಿನ್ನ ಪತ್ರಕ್ಕೆ ವಿವರಣೆ ಕೊಡುತ್ತೇನೆ. ಸದ್ಯಕ್ಕೆ ಸಂಸತ್‌ ಅಧಿವೇಶನದಲ್ಲಿ ಇರುವುದರಿಂದ ಬ್ಯುಸಿಯಾಗಿದ್ದೇನೆ. ಒಂದೆರೆಡು ದಿನ ಸಮಯ ಕೊಡು. ಫೇಸ್‌ಬುಕ್‌ ಅಥವಾ ಲಿಖಿತವಾಗಿ ಉತ್ತರಿಸುತ್ತೇನೆ ಎಂದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top