fbpx
ಸಮಾಚಾರ

IPL 2020 ಮೇಲೆ ಕೊರೋನಾ ವೈರಸ್‌ ಕರಿನೆರಳು? ಮೌನ ಮುರಿದ ಗಂಗೂಲಿ!

ಐಪಿಎಲ್ ಕ್ರಿಕೆಟ್‌ ಹಬ್ಬ ಶುರುವಾಗಲಿ ದಿನಗಣನೆ ಶುರುವಾಗಿದೆ. ಎಲ್ಲಾ ತಂಡಗಳ ಅಭಿಮಾನಿಗಳು ಈ ಸಲ ಕಪ್‌ ನಮ್ದೇ ಅನ್ನೋ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಆದರೆ ಐಪಿಎಲ್‌ ಪ್ರಾರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ ಕೊರೊನಾ ವೈರಸ್ ದೇಶದ ಜನರಲ್ಲಿ ಭಯವನ್ನು ಸೃಷ್ಟಿ ಮಾಡಿದೆ. ಅಲ್ಲದೆ ಕೊರೊನ ವೈರಸ್ ಕರಿನೆರಳು ಐಪಿಎಲ್‌ ಮೇಲೆಯೂ ಪರಿಣಾಮ ಬೀರುತ್ತಾ? ಎಂಬ ಪ್ರಶ್ನೆ ಕಾಡುತ್ತಿದೆ. ಈ ಮಧ್ಯೆ ಇದಕ್ಕೆಲ್ಲಾ ಐಪಿಎಲ್‌ ಆಡಳಿತ ಮಂಡಳಿ ತೆರೆ ಎಳೆದಿದೆ.

ಐಪಿಎಲ್ 13ನೇ ಆವೃತ್ತಿಯ ಕ್ರಿಕೆಟ್ ಟೂರ್ನಿಯು ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಐಪಿಎಲ್ ಮುಖ್ಯಸ್ಥ ಬ್ರಿಜೇಶ್ ಪಟೇಲ್ ಸ್ಪಷ್ಟಪಡಿಸಿದ್ದಾರೆ. ಅದೇ ಹೊತ್ತಿಗೆ ಎಲ್ಲ ರೀತಿಯ ಎಚ್ಚರಿಕೆಯನ್ನು ವಹಿಸಲಾಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ನಿಗಾ ವಹಿಸುತ್ತಿದ್ದಾರೆ ಎಂದು ಬ್ರಿಜೇಶ್ ಪಟೇಲ್ ತಿಳಿಸಿದರು.

ಬಿಸಿಸಿಐ ಅಧ್ಯಕ್ಷ, ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಕೂಡ ಐಪಿಎಲ್‌ಗೆ ಕೊರೊನಾ ವೈರಸ್ ಭೀತಿಯಿರುವ ವಿಚಾರವನ್ನು ತಳ್ಳಿ ಹಾಕಿದ್ದಾರೆ. ‘ಭಾರತದಲ್ಲಿ ಅಂಥ ಆತಂಕವೇನಿಲ್ಲ. ಅದರ (ಕೊರೊನಾ ವೈರಸ್) ಬಗ್ಗೆ ಇನ್ನೂ ಯಾವುದೇ ಚರ್ಚೆಯೂ ನಡೆದಿಲ್ಲ.. ಐಪಿಎಲ್ ಪಂದ್ಯ ಅಥವಾ ದಕ್ಷಿಣ ಆಫ್ರಿಕಾ ಸರಣಿ ಪಂದ್ಯಗಳಿಗೆ ಕೊರೊನಾ ವೈರಸ್ ನಿಂದ ಯಾವುದೇ ರೀತಿಯ ತೊಂದರೆಯಿಲ್ಲ’ ಎಂದು ಗಂಗೂಲಿ ಹೇಳಿದ್ದಾರೆ.

ಐಪಿಎಲ್ ಟೂರ್ನಿಗೆ ಕೊರೋನಾ ವೈರಸ್ ಆತಂಕ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪ್ರತಿಕ್ರಿಯೆ ನೀಡಿದ್ದಾರೆ. 2020ರ ಐಪಿಎಲ್ ಟೂರ್ನಿ ನಿಗದಿಯಾಗಿರುವ ವೇಳಾಪಟ್ಟಿ ಪ್ರಕಾರ ನಡೆಯಲಿದೆ. ಕೊರೋನಾ ವೈರಸ್ ಹರಡದಂತೆ ತಡೆಯಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಗಂಗೂಲಿ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾರ್ಗಸೂಚಿಗಳ ಅನುಸಾರ ಐಪಿಎಲ್ ಟೂರ್ನಿ ನಡೆಯಲಿದೆ. ಬೇಕಾದ ಕ್ರಮಗಳನ್ನು ಆರೋಗ್ಯ ಇಲಾಖೆ ಜೊತೆ ಕೈಗೊಂಡಿದ್ದೇವೆ. ಅಭಿಮಾನಿಗಳ ಜೊತೆ ಕೈಕುಲುಕದಂತೆ, ಆಟಗಾರರು ತಂಗುವ ಹೊಟೆಲ್‌, ಕ್ರೀಡಾಂಗಣದಲ್ಲಿ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಗಂಗೂಲಿ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top