fbpx
ಸಮಾಚಾರ

ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ!

ಖ್ಯಾತ ಹಿರಿಯ ನಟಿ ಮತ್ತು ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಉತ್ತರ ಪ್ರದೇಶದ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಹೀಗಾಗಿ ನಟಿಯನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ.

 

 

ಕಳೆದ ಲೋಕಸಭಾ ಚುನಾವಣೆಯಲ್ಲಿ ಜಯಪ್ರದಾ ಅವರು ಉತ್ತರ ಪ್ರದೇಶದ ರಾಂಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. ಈ ವೇಳೆ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ 57 ವರ್ಷದ ನಟಿ, ಬಿಜೆಪಿ ನಾಯಕಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.. ಇದೀಗ ವಾರೆಂಟ್ ಹೊರಡಿಸಿದ್ದು, ಮುಂದಿನ ಏಪ್ರಿಲ್ 20 ರಂದು ವಿಚಾರಣೆ ನಡೆಯಲಿದೆ.

ಅಂದಹಾಗೆ ಜಯಪ್ರದಾ ಅವರು ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಮಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಸಮಾಜವಾದಿ ಪಕ್ಷದ ಅಜಂ ಖಾನ್ ವಿರುದ್ಧ 1 ಲಕ್ಷ ಮತಗಳ ಅಂತರದಲ್ಲಿ ಸೋತಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top