fbpx
ಸಮಾಚಾರ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶಗಳು!

ಕರ್ನಾಟಕದ ಅರಣ್ಯ ಇಲಾಖೆ ಅರಣ್ಯ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 16/3/2020 ರಿಂದ 15/4/2020ರ ತನಕ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ.

ವಿದ್ಯಾರ್ಹತೆ:
ದ್ವಿತೀಯ ಪಿಯುಸಿ /12ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:
ಅಧಿಸೂಚನೆಯ ದಿನಾಂಕಕ್ಕೆ ಕನಿಷ್ಟ 18 ರಿಂದ ಗರಿಷ್ಟ 32 ವರ್ಷದೊಳಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು, ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ಮತ್ತು ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಸಾಮಾನ್ಯ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:
ಅರಣ್ಯ ರಕ್ಷಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಮೆರಿಟ್ ಹಾಗೂ ಪ್ರವರ್ಗವಾರು ಮೀಸಲಾತಿ ಆಧಾರದ ಮೇಲೆ ವೃತ್ತವಾರು ಪ್ರತ್ಯೇಕವಾಗಿ 1:20 ಪಟ್ಟಿಯನ್ನು ಸಿದ್ದಪಡಿಸಿ, ಅರ್ಹ ಅಭ್ಯರ್ಥಿಗಳಿಗೆ ಮಾತ್ರ ದೇಹದಾರ್ಢ್ಯತೆ, ದೈಹಿಕ ತಾಳ್ವಿಕೆ ಮತ್ತು ದೈಹಿಕ ಕಾರ್ಯಸಮರ್ಥತೆ ಪರೀಕ್ಷೆಗಳಿಗೆ ಪ್ರವೇಶ ಪತ್ರ ನೀಡಲಾಗುವುದು. ದೈಹಿಕ ಪರೀಕ್ಷೆಗಳಲ್ಲಿ ಅರ್ಹರಾದ ಅಭ್ಯರ್ಥಿಗಳನ್ನು ಮಾತ್ರ ಲಿಖಿತ ಪರೀಕ್ಷೆಗೆ ಪರಿಗಣಿಸಿ ಅದರಲ್ಲಿ ಪಾಸ್ ಆದ ಅಭ್ಯರ್ಥಿಗಳನ್ನು ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top