fbpx
ಸಮಾಚಾರ

ಚೆಲುವ ಚಾಮರಾಜನಗರಕ್ಕೆ ಪುನೀತ್ ರಾಯಭಾರಿ: ಗಡಿ ಜಿಲ್ಲೆ ಅಭಿವೃದ್ಧಿಗೆ ‘ಪವರ್‌ ಸ್ಟಾರ್‌’ ಬಲ

ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿಗೆ ಗುರಿಯಾಗಿರುವ ಚಾಮರಾಜನಗರ ಜಿಲ್ಲೆಯ ಸಾಂಸ್ಕೃತಿಕ ಪರಂಪರೆ ಹಾಗೂ ಅಭಿವೃದ್ಧಿಪರ ನಡಿಗೆಯನ್ನು ಹೊರ ಜಗತ್ತಿಗೆ ಪರಿಚಯಿಸಿ, ಜಿಲ್ಲೆಯ ಗರಿಮೆಯನ್ನು ಪ್ರಚುರ ಪಡಿಸಲು ಚಿತ್ರನಟ ಪುನೀತ್‌ ರಾಜಕುಮಾರ್‌ ಅವರು ರಾಯಭಾರಿಯಾಗಿ ಕೆಲಸ ಮಾಡಲಿದ್ದಾರೆ.

ಮೂಲತಃ ಚಾಮರಾಜನಗರ ಜಿಲ್ಲೆಯವರೇ ಆದ ಪುನೀತ್‍ರಾಜ್‍ಕುಮಾರ್ ಅವರನ್ನು ಶನಿವಾರ ಸಂಜೆ ಸದಾಶಿವನಗರದ ಅವರ ಮನೆಯಲ್ಲಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿಯಾಗಿ ಚಾಮರಾಜನರ ಜಿಲ್ಲಾಡಳಿತದ ಪರವಾಗಿ ಪುನೀತ್ ರಾಜ್‍ಕುಮಾರ್ ಅವರನ್ನು ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಿ ಕಾರ್ಯನಿರ್ವಹಿಸಲು ಅಧಿಕೃತವಾಗಿ ಆಹ್ವಾನ ನೀಡಿದರು.

ಜಿಲ್ಲಾಡಳಿತ ರೂಪಿಸಿರುವ ಈ ಅಭಿಯಾನದ ಮೂಲಕ ಚಾಮರಾಜನಗರವನ್ನು ಬ್ಯ್ರಾಂಡ್ ಆಗಿ ರೂಪಿಸಿ, ಪ್ರವಾಸಿಗರನ್ಬು ಸೆಳೆಯುವುದು, ಅರಣ್ಯ, ಜಾನಪದ, ಜಲಪಾತ, ಅಪಾರ ಖನಿಜ ಸಂಪತ್ತನ್ನು ಹೊಂದಿರುವ ಚಾಮರಾಜನಗರವನ್ನು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಬೇಕೆಂಬ ಆಶಯವೇ ಚೆಲುವ ಚಾಮರಾಜನಗರ. ಜಿಲ್ಲಾಧಿಕಾರಿ ಡಾ.ಎಂ.ಆರ್ .ರವಿ ಅವರ ಕಲ್ಪನೆಯಲ್ಲಿ ಈಗಾಗಲೇ ಅಭಿಯಾನಕ್ಮೆ ಚಾಲನೆ ದೊರೆತಿದೆ. ಅಲ್ಲದೇ ಪುನೀತ್ ಅವರು ರಾಯಭಾರಿ ಆಗಬೇಕೆಂಬ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ ಕುಮಾರ್ ಪ್ರಸ್ತಾಪಕ್ಕೆ ಪವರ್ ಸ್ಟಾರ್‌ ಒಪ್ಪಿದ್ದಾರೆ.

”ಚಾಮರಾಜನಗರ ಜಿಲ್ಲೆ ನಮ್ಮದು ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಮೂಡುವಂತೆ ಸಮಗ್ರ ಅಭಿವೃದ್ದಿಯೊಂದಿಗೆ ಜಿಲ್ಲೆಯನ್ನು ಚಂದಗಾಣಿಸುವ ಉದ್ದೇಶ ಹೊಂದಲಾಗಿದೆ. ಜಿಲ್ಲೆಯು ತ್ವರಿತವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಪುನೀತ್ ರಾಜ್ ಕುಮಾರ್ ಅಭಿವೃದ್ಧಿ ರಾಯಭಾರಿಯಾಗಿ ಸೇವೆ ಸಲ್ಲಿಸುವುದರಿಂದ ಪ್ರವಾಸೋದ್ಯಮ, ಕೈಗಾರಿಕೆ ಹಾಗೂ ಇತರೆ ಕ್ಷೇತ್ರಗಳ ಪ್ರಗತಿಯಾಗಿ ಜಿಲ್ಲೆಯ ಅಭಿವೃದ್ಧಿಯ ವೇಗ ಇನ್ನೂ ಹೆಚ್ಚಾಗಲಿದೆ.” ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top