fbpx
ಸಮಾಚಾರ

ಮತ್ತು ಬರೋ ಜ್ಯೂಸ್ ಕುಡಿಸಿ ಹಿರಿಯ ನಟ ಮಗನಿಂದ ರೇಪ್– ವಿಡಿಯೋ ರೆಕಾರ್ಡ್ ಮಾಡಿ ಜೀವ ಬೆದರಿಕೆ

ಯುವತಿ ಮೇಲೆ ಅತ್ಯಾಚಾರ ಎಸಗಿ ಬೆದರಿಕೆ ಹಾಕಿದ ಆರೋಪದಡಿ ತಮಿಳು ಚಿತ್ರರಂಗದ ಹಿರಿಯ ನಟ ಸೂರ್ಯಕಾಂತ್ ಅವರ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯ್​ ಹರೀಶ್​​ ಬಂಧಿತ ಆರೋಪಿ.

 

 

25ವರ್ಷ ವಯಸ್ಸಿನ ವಿಜಯ್ ಹರೀಶ್ ಅಣ್ಣಾನಗರ್ ನಿವಾಸಿಯಾಗಿದ್ದು, ಕಾಲೇಜು ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡು, ಆನ್ ಲೈನ್ ನಲ್ಲಿ ಅತ್ಯಾಚಾರ ಎಸಗಿದ ದೃಶ್ಯಗಳನ್ನು ಅಪ್ಲೋಡ್ ಮಾಡುವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ವಿಜಯ್ ಹರೀಶ್ ವಿರುದ್ಧ ಸಂತ್ರಸ್ತೆ ದೂರು ನೀಡಿದ್ದು, ಇದೀಗ ಆತನನ್ನು ಬಂಧಿಸಲಾಗಿದೆ.

ಚೆನ್ನೈನ ವಿರುಗಂಬಕ್ಕಂನಲ್ಲಿರುವ ಅಪಾರ್ಟ್ ಮೆಂಟ್‍ನಲ್ಲಿ ಇದ್ದಾಗ ಇಬ್ಬರಿಗೂ ಪರಿಚಯವಿತ್ತು. ಆದರೆ ಜನವರಿಯಲ್ಲಿ ವಿಜಯ್ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹರೀಶ್ ನನಗೆ ಕುಡಿಯಲು ಜ್ಯೂಸ್ ಕೊಟ್ಟಿದ್ದನು. ಆದರೆ ಅದರಲ್ಲಿ ನನಗೆ ತಿಳಿಯದಂತೆ ಮತ್ತು ಬರುವ ಔಷಧಿಯನ್ನು ಮಿಕ್ಸ್ ಮಾಡಿದ್ದನು. ಅದನ್ನು ಕುಡಿದ ನಂತರ ನನಗೆ ಪ್ರಜ್ಞೆ ತಪ್ಪಿದೆ. ಬಳಿಕ ವಿಜಯ್ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದ ಸಂತ್ರಸ್ತೆ ಪೊಲೀಸರಿಗೆ ಹೇಳಿದ್ದಾರೆ.

ಸದ್ಯ ಯುವತಿಯ ದೂರಿನ ಅನ್ವಯ ವಿಜಯ್​ ಹರೀಶ್​ರನ್ನು ಪೊಲೀಸರು ಬಂಧಿಸಿದ್ದಾರೆ. ಭಾರತೀಯ ದಂಡ ಸಂಹಿತೆ ಸೆಕ್ಷನ್​ 328, 354ಸಿ, 376 ಪ್ರಕಾರ ಪ್ರಕರಣ ದಾಖಲಿಸಿಕೊಂಡು ಎಫ್​ಐಆರ್​ ರಿಜಿಸ್ಟರ್ ಮಾಡಿದ್ದಾರೆ. ನಂತರ ವಿಜಯ್​ ಹರೀಶ್​ನನ್ನು ಬಂಧಿಸಿ ನ್ಯಾಯಲಕ್ಕೆ ಹಾಜರು ಪಡಿಸಲಾಗಿದೆ. ಸದ್ಯ ನ್ಯಾಯಾಂಗ ಬಂಧನ ವಿಧಿಸಿಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top