fbpx
ಸಮಾಚಾರ

ಬಿಜೆಪಿ ಸೇರ್ಪಡೆ ವಿಚಾರ: ಸ್ಪಷ್ಟನೆ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ!

ತಾವು ಬಿಜೆಪಿ ಸೇರುತ್ತೇವೆ ಎಂದು ಕೇಳಿ ಬರುತ್ತಿರುವ ಮಾತಿಗೆ ಕೊನೆಗೂ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ ಎಂದು ಹೇಳಿದ್ದಾರೆ!

 

 

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ. ಕಾನೂನು ವಿದ್ಯಾರ್ಥಿಯಾಗಿ 1972ರಲ್ಲಿ ರಾಜಕೀಯ ಪ್ರವೇಶ ಮಾಡಿದಾಗಿಂದ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ ವ್ಯವಸ್ಥೆ ಪರ ಹೋರಾಡುತ್ತಾ ಬಂದಿದ್ದೇನೆ, ಬಿಜೆಪಿ ಈ ಎಲ್ಲಾ ತತ್ವಗಳಿಗೂ ವಿರುದ್ಧವಾಗಿದೆ. ಹೀಗಿರುವಾಗ ಬಿಜೆಪಿ ಸೇರಲು ಸಾಧ್ಯವೇ? ಇದೊಂದು ಮೂರ್ಖತನದ ಪ್ರಚಾರ. ಎಂದಿದ್ಧಾರೆ.

 

 

“ಯಾರೇ ಆಗಲಿ ಒಂದು ಸಿದ್ಧಾಂತಕ್ಕೆ ಬದ್ಧವಾಗಿದ್ದಾಗ ಪದೇ ಪದೇ ಪಕ್ಷ ಬದಲಿಸುವಂತಹ ಸನ್ನಿವೇಶವೇ ಉದ್ಭವಿಸುವುದಿಲ್ಲ. ಅವಕಾಶವಾದಿ ರಾಜಕಾರಣಿಗಳು ಮಾತ್ರ ಅಧಿಕಾರ ಹುಡುಕಿಕೊಂಡು ಹೋಗುತ್ತಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಜನರಿಂದ ನೇರವಾಗಿ ಸಿಗಬೇಕೇ ಹೊರತು ವಾಮಮಾರ್ಗದ ಮೂಲಕ ಅಧಿಕಾರ ಪಡೆಯಲು ಹಪಹಪಿಸಬಾರದು” ಎಂದು ಟ್ವೀಟ್‌ ಮೂಲಕ ಉತ್ತರಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top