fbpx
ಸಮಾಚಾರ

ಕೊರೋನಾ ಹರಡುವಿಕೆಯಲ್ಲಿ ಚೀನಾವನ್ನು ಹಿಂದಿಕ್ಕಿದ ಭಾರತ: 85 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ!

ಮಹಾಮಾರಿ ಕೊರೋನಾ ವೈರಸ್ ಭಾರತದಲ್ಲಿ ತನ್ನ ಉಗ್ರ ಪ್ರತಾಪವನ್ನು ಮುಂದುವರೆಸಿದ್ದು, ದೇಶದಲ್ಲಿ 24 ಗಂಟೆಗಳಲ್ಲಿ 3970 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 85,970ಕ್ಕೆ ತಲುಪಿದೆ. ಈ ಮೂಲಕ ವಿಶ್ವದಲ್ಲಿಯೇ ಮೊದಲ ಬಾರಿಗೆ ಕೊರೋನಾ ವೈರಸ್ ಕಾಣಿಸಿಕೊಂಡ ಚೀನಾವನ್ನು ಭಾರತ ಹಿಂದಿಕ್ಕಿದೆ.

ಅತಿ ಹೆಚ್ಚು ಕೊರೊನಾ ವೈರಸ್ ಸೋಂಕು ಪ್ರಕರಣ ಹೊಂದಿರುವ ದೇಶಗಳ ಪೈಕಿ ಸದ್ಯ ಭಾರತ 11ನೇ ಸ್ಥಾನದಲ್ಲಿದೆ. ಭಾರತದಲ್ಲೀಗ ಒಟ್ಟಾರೆ ಸೋಂಕುಗಳ ಸಂಖ್ಯೆ 85 ಸಾವಿರ ಗಡಿ ದಾಟಿದೆ. ಇನ್ನೊಂದೆಡೆ ಚೀನಾದಲ್ಲಿ ಅಧಿಕೃತವಾಗಿ 84,031 ಪ್ರಕರಣಗಳು ದಾಖಲಾಗಿದೆ.

ಈವರೆಗೆ ಕೊರೊನಾದಿಂದ 30,153 ಮಂದಿ ಗುಣಮುಖರಾಗಿದ್ದಾರೆ. 24 ಗಂಟೆಯಲ್ಲಿ 3,970 ಮಂದಿಗೆ ಸೋಂಕು ದೃಢಪಟ್ಟಿದ್ದು, 103 ಮಂದಿ ಸಾವನ್ನಪ್ಪಿದ್ದಾರೆ. ಇದರ ಜೊತೆಗೆ ಅತೀ ಹೆಚ್ಚು ಸೋಂಕಿತರು ಇರುವ ವಿಶ್ವದ ದೇಶಗಳ ಪಟ್ಟಿಯಲ್ಲಿ ಭಾರತ 11ನೇ ಸ್ಥಾನಕ್ಕೆ ಏರಿದೆ. 85,940 ಮಂದಿ ಸೋಂಕಿತರಲ್ಲಿ 30,153 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 53,035 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ವರದಿಯಾಗಿದೆ.

ಪ್ರಪಂಚದಾದ್ಯಂತ, 44 ಲಕ್ಷಕ್ಕೂ ಹೆಚ್ಚು ಜನರು ಕರೋನವೈರಸ್ ಗೆ ತುತ್ತಾಗಿದ್ದಾರೆ, ಯುಎಸ್ ಸುಮಾರು ಮೂರನೇ ಒಂದು ಭಾಗದಷ್ಟು ಪ್ರಕರಣಗಳನ್ನು ವರದಿ ಮಾಡಿದೆ. ಈ ಕಾಯಿಲೆಯಿಂದ 3 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ರಷ್ಯಾ, ಯುಕೆ ಮತ್ತು ಸ್ಪೇನ್ ಎರಡನೇ, ಮೂರನೇ ಮತ್ತು ನಾಲ್ಕನೇ ಸ್ಥಾನಗಳಲ್ಲಿ ತಲಾ 2 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ಹೊಂದಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top