fbpx
ಸಮಾಚಾರ

BREAKING: SSLC ಮತ್ತು PUC ಪರೀಕ್ಷೆ ವೇಳಾಪಟ್ಟಿ ಪ್ರಕಟ.

ಕೊವಿಡ್-19 ಲಾಕ್ ಡೌನ್ ಪರಿಣಾಮ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಇಂಗ್ಲಿಷ್ ಪರೀಕ್ಷೆ ವೇಳಾಪಟ್ಟಿ ಸೋಮವಾರ ಪ್ರಕಟವಾಗಿದ್ದು, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​. ಸುರೇಶ್​ ಕುಮಾರ್​ ಅವರು ಹೇಳಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ, ಮುಖ್ಯಮಂತ್ರಿ ಯಡಿಯೂರಪ್ಪನವರು ಪರೀಕ್ಷೆ ನಡೆಸಲು ಅನುಮತಿ ನೀಡಿದ್ದಾರೆ. “ಜೂನ್ 25 ರಿಂದ ಜುಲೈ 4ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದರೆ ದ್ವಿತೀಯ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ಜೂನ್ 18ಕ್ಕೆ ನಡೆಯಲಿದೆ. ಒಟ್ಟು 2,879 ಕೇಂದ್ರದಲ್ಲಿನ 43,720 ಕೊಠಡಿಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಲಾಗುವುದು” ಎಂದು ತಿಳಿಸಿದರು.

ಭಾರತ್ ಸ್ಕೌಟ್ಸ್ ನವರು ಒಂದೊಂದು ಮುಖಗವಸು ಕೊಡಲಿದ್ದಾರೆ. ರಾಮಕೃಷ್ಣ ಮಿಶನ್ ನಿಂದ 2 ಲಕ್ಷ ಮುಖ ಗವಸು ಕೊಡಲಿದ್ದಾರೆ. ಎಲ್ಲಾ ಕೇಂದ್ರಗಳು ಸ್ಯಾನಿಟೈಸರ್ ಬಳಸಲಾಗುವುದು. ಎಂಬೆಸಿ ಗ್ರೂಪ್ ನವರು ಇದನ್ನು ಒದಗಿಸಲಿದ್ದಾರೆ. ಜ್ವರದ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗುವುದು. ಸಮಾಜಕಲ್ಯಾಣ ಶಾಲೆಗಳನ್ನು ಗಳನ್ನು ಕ್ವಾರಂಟೈನ್ ಮಾಡಿದ್ದರಿಂದ ಅಂತಹ ಪರೀಕ್ಷಾ ಕೇಂದ್ರಗಳ ವಿದ್ಯಾರ್ಥಿಗಳಿಗೆ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದರು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top