fbpx
ಸಮಾಚಾರ

4014 ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ; ಅರ್ಜಿ ಸಲ್ಲಿಕೆ ಆರಂಭ

ಕರ್ನಾಟಕ ಪೊಲೀಸ್ ಇಲಾಖೆ ಖಾಲಿ ಇರುವ 4104 ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇಂದಿನಿಂದ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ : ಇಂದಿನಿಂದ (20-05-2020) ರಿಂದ 22-06-2020ರ ವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ.

ಹುದ್ದೆಗಳು:
ಪೊಲೀಸ್ ಕಾನ್ಸ್‌ಟೇಬಲ್(ನಾಗರಿಕ)- 2565
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್‌/ಡಿಎಆರ್‌)-1449
ಒಟ್ಟು- 4014

ವಿದ್ಯಾರ್ಹತೆ
– ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್‌ ಮಾಡಿರಬೇಕು.
– ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅಪ್ಲಿಕೇಶನ್‌ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್‌ ಮಾಡಿರಬೇಕು.

ಅರ್ಜಿ ಶುಲ್ಕ:
-ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.250.
-ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.100.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು http://cpcnhk20.ksp-online.in/ ಗೆ ಭೇಟಿ ನೀಡಿ, ಅಧಿಸೂಚನೆಯ ಸೂಚನೆಗಳನ್ನು ಓದಿಕೊಂಡು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅಗತ್ಯ ತಯಾರಿಗಳನ್ನು ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ನೋಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top