fbpx
ಸಮಾಚಾರ

“ಕಿರಾಣಿ ಅಂಗಡಿಗಳಿಗೆ ಹೋಗಿ ವ್ಯಾಪಾರ ಮಾಡಿ” ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿಶೇಷ ಮನವಿ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ಲಾಕ್‍ಡೌನ್ ವೇಳೆ ಕಿರಾಣಿ ಅಂಗಡಿಗಳಿಗೆ ಹೋಗಿ ವ್ಯಾಪಾರ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಪಿಜ್ಜಾ, ಬರ್ಗರ್ ಬಿಟ್ಟು ಕಿರಣಿ ಅಂಗಳಿಗೆ ಹೋಗಿ ವ್ಯಾಪಾರ ಮಾಡಿ ಅವರ ಬದುಕಿಗೂ ಸಹಾಯವಾಗುತ್ತೆ ಎಂದು ಹೇಳಿದ್ದಾರೆ. ಈ ಬಗ್ಗೆ ವಿಜಯಲಕ್ಷ್ಮೀ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

“ಕೊರೊನಾ ಲಾಕ್‍ಡೌನ್‍ನಿಂದ ಸಣ್ಣ ಉದ್ಯಮಗಳು ದೊಡ್ಡ ಸಂಕಷ್ಟವನ್ನು ಅನುಭವಿಸುತ್ತಿವೆ. ಲಾಕ್‍ಡೌನ್ ಮುಗಿದ ನಂತರ ಸ್ಥಳೀಯ ಮಾರಾಟಗಾರರಿಂದ ತರಕಾರಿಗಳನ್ನು ಖರೀದಿಸಿ. ಸ್ಟಾರ್ ಹೋಟೆಲ್‍ಗೆ ಹೋಗಿ ಕಾಫಿ ಕುಡಿಯುವ ಬದಲು ನಿಮ್ಮ ಮನೆಯ ಹತ್ತಿರ ಇವರ ಅಂಗಡಿಗೆ ಹೋಗಿ ಕಾಫಿ ಕುಡಿಯಿರಿ. ಅಮೆಜಾನ್ ಬದಲಿಗೆ ಸ್ಥಳೀಯ ಕಿರಾಣಿ ಅಂಗಡಿಗಳಲ್ಲಿ ದಿನಸಿ ವಸ್ತುಗಳನ್ನು ಖರೀದಿಸಿ. ಈ ಕೊರೊನಾ ಮಹಾಮಾರಿ ವೇಳೆ ಸಣ್ಣ ವ್ಯಾಪಾರಿಗಳಿಗೆ ನಿಮ್ಮ ಸಹಾಯದ ಅಗತ್ಯವಿದೆ’ ಎಂದು ಮನವಿ ಮಾಡಿಕೊಂಡಿದ್ದಾರೆ.

 

 

“ಅಮೆಜಾನ್, ಪಿಜ್ಜಾ, ಕೆ ಎಫ್ ಸಿ, ಮ್ಯಾಕ್ ಡೊನಾಲ್ಡ್ ಹೇಗೋ ಬದುಕುತ್ತವೆ. ಆದರೆ ಸಣ್ಣ ವ್ಯಾಪಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಕಿರಾಣಿ ಅಂಗಡಿಗಳಿಗೆ ಹೋಗಿ ವ್ಯಾಪಾರ ಮಾಡಿ. ಇದರಿಂದ ಅವರ ಬದುಕಿಗೂ ಸಹಾಯ ಆಗುತ್ತೆ” ದೀರ್ಘವಾದ ಟ್ವೀಟ್ ಮಾಡುವ ಮೂಲಕ ಸಣ್ಣ ವ್ಯಾಪಾರಿಗಳ ಪರ ನಿಂತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top