fbpx
ಸಮಾಚಾರ

ನಾಳೆ ರಾಜ್ಯದಾದ್ಯಂತ ಸಂಪೂರ್ಣ ಲಾಕ್‌ಡೌನ್: ಏನಿರುತ್ತೆ, ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ

ನಾಳೆ (ಮೇ 24) ರಾಜ್ಯದಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದ್ದು ರಾಜ್ಯದಲ್ಲಿ ಸಂಪೂರ್ಣ ಲಾಕ್​ಡೌನ್ (Lockdown) ಇರಲಿದೆ. ಇಂದು (ಶನಿವಾರ) ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 7ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಸರ್ಕಾರ ಘೋಷಿಸಿದೆ.

ನಾಲ್ಕನೇ ಅವಧಿಯ ಲಾಕ್‌ಡೌನ್‌ಗಿಂತಲೂ ಮೊದಲಿದ್ದ ಮಾದರಿಯಲ್ಲಿಯೇ ಸಂಪೂರ್ಣ ಲಾಕ್‌ಡೌನ್‌ ಇರುತ್ತದೆ. ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ. ಕರ್ಫ್ಯೂ ಅವಧಿಯಲ್ಲಿ ರಾಜ್ಯದಾದ್ಯಂತ ಬಿಗಿ ಭದ್ರತೆ ಇರಲಿದೆ. ಈ ಅವಧಿಯಲ್ಲಿ ಯಾವುದೇ ಅಂಗಡಿಗಳನ್ನು ತೆರೆಯುವಂತಿಲ್ಲ. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏನಿರುತ್ತೆ?
*ಹಣ್ಣು, ಹಾಲು, ತರಕಾರಿ ,ಮೊಟ್ಟೆ ಮಾಂಸ,ದಿನಸಿ ಪದಾರ್ಥ ಅಂಗಡಿ
*ಆಸ್ಪತ್ರೆ, ಮೆಡಿಕಲ್ ಸ್ಟೋರ್ಸ್, ಫಾರ್ಮಸಿ
*ಡಾಕ್ಟರ್ಸ್, ನರ್ಸ್​​, ಆಂಬುಲೆನ್ಸ್ ಓಡಾಟಕ್ಕೆ ಅವಕಾಶ
*ಅನಾರೋಗ್ಯ ಸಮಸ್ಯೆವುಳ್ಳರಿಗೆ ಆಸ್ಪತ್ರೆಗೆ ಹೋಗಲು ಅವಕಾಶ, ಗರ್ಭಿಣಿ ಸ್ತ್ರೀಯರಿಗೆ ತಪಾಸಣೆಗೆ ಸಮಸ್ಯೆ ಇಲ್ಲ
*ಮದುವೆ ಸಮಾರಂಭಗಳಿಗೆ ಷರತ್ತಿನ ಅನುಮತಿ

ಭಾನುವಾರ ಏನಿರಲ್ಲ?
* ಸಾರ್ವಜನಿಕ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ
* ಬಸ್ ಸಂಚಾರ ಇರಲ್ಲ
* ಅಗತ್ಯ ವಸ್ತುಗಳನ್ನ ಹೊರತು ಪಡಿಸಿ, ಉಳಿದ ಅಂಗಡಿ ಮುಂಗಟ್ಟುಗಳು ಬಂದ್
* ನಗರದ ಪ್ರಮುಖ ರಸ್ತೆಗಳು ಬ್ಯಾರಿಕೆಡ್‍ನಿಂದ ಕ್ಲೋಸ್

* ಬ್ಯೂಟಿ ಪಾರ್ಲರ್, ಸಲೂನ್, ಸ್ಪಾ, ಬಟ್ಟೆ ಅಂಗಡಿ, ಚಪ್ಪಲಿ ಅಂಗಡಿ ಮುಂಗಟ್ಟುಗಳು ಬಂದ್.
* ಗಾರ್ಮೆಂಟ್ಸ್ ಫ್ಯಾಕ್ಟರಿ ಸೇರಿದಂತೆ ಎಲ್ಲಾ ಕಾರ್ಖಾನೆಗಳು ಲಾಕ್
* ಖಾಸಗಿ ಕಂಪನಿಗಳೂ ಕೂಡ ಬಂದ್
* ಎಲ್ಲಾ ಪಾರ್ಕ್ ಗಳಿಗೂ ಬೀಗ ಬೀಳಲಿದ್ದು, ಜಾಗಿಂಗ್ ವಾಕಿಂಗ್ ಗೆ ಪರ್ಮೀಷನ್ ಇಲ್ಲ.

* ಚಿನ್ನದ ಅಂಗಡಿಗಳು ಕೂಡ ಕ್ಲೋಸ್ ಆಗಲಿವೆ
* ಆಟೋ, ಟ್ಯಾಕ್ಸಿ ಕ್ಯಾಬ್ ಗಳು ರಸ್ತೆಗೆ ಇಳಿಯುವಂತಿಲ್ಲ
* ಖಾಸಗಿ ವಾಹನ ಬಳಸಿ ಓಡಾಡುವ ಹಾಗಿಲ್ಲ
* ಬೇರೆ ಜಿಲ್ಲೆಗೆ ಹೋಗಲು ಅವಕಾಶವಿಲ್ಲ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top