fbpx
ಸಮಾಚಾರ

ಬಿಜೆಪಿಯಲ್ಲಿನ ಭಿನ್ನಮತ‌ ವಿಚಾರ ಸಿಎಂ ಬಿಎಸ್​ವೈ ಪ್ರತಿಕ್ರಿಯಿಸಿದ್ದು ಹೀಗೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಕೆಲ ಬಿಜೆಪಿ ಶಾಸಕರು ಬಂಡಾಯವೆದ್ದಿದ್ದು, ರಹಸ್ಯವಾಗಿ ಸಭೆ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಶಾಸಕರೊಂದಿಗೆ ಚರ್ಚಿಸಲು ಸಿಎಂ ತುರ್ತು ಸಭೆ ಕರೆದಿದ್ದಾರೆ ಎಂಬ ಸುದ್ದಿಯನ್ನು ಸ್ವತಃ ಸಿಎಂ ಬಿಎಸ್‌ವೈ ತಳ್ಳಿ ಹಾಕಿದ್ದಾರೆ.

 

 

ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ “ಪಕ್ಷದ ಕೆಲವು ಶಾಸಕರೊಂದಿಗೆ ಚರ್ಚಿಸಲು ನಾನು ತುರ್ತು ಸಭೆ ಕರೆದಿದ್ದೇನೆ ಎನ್ನುವ ಸುದ್ದಿ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದನ್ನು ಗಮನಿಸಿದ್ದೇನೆ. ಇದು ಸತ್ಯಕ್ಕೆ ದೂರವಾದ ಸಂಗತಿ. ಅಂತಹ ಯಾವುದೇ ಸಭೆಯನ್ನು ನಾನು ಕರೆದಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇನೆ” ಎಂದು ಟ್ವೀಟ್‌ ಮಾಡಿದ್ದಾರೆ.

ಅಂದಹಾಗೆ ಬಿಜೆಪಿಯ 20 ಕ್ಕೂ ಹೆಚ್ಚು ಮಂದಿ ಬಿಜೆಪಿ ಶಾಸಕರು ಪ್ರತ್ಯೇಕವಾಗಿ ಸಭೆ ನಡೆಸಿರುವುದು ಮಹತ್ವದ ರಾಜಕೀಯ ಬೆಳವಣಿಗೆಯಾಗಿತ್ತು. ಬೆಂಗಳೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಸಭೆ ಸೇರಿದ್ದ ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ಸರಕಾರದ ಕಾರ್ಯವೈಖರಿ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಭಾಗವಹಿಸಿದ್ದ ಹಲವು ಶಾಸಕರು ಸಿಎಂ ಕಾರ್ಯವೈಖರಿಗೆ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top