fbpx
ಸಮಾಚಾರ

ಎಸ್‌ಎಂ ಕೃಷ್ಣ ಮೊಮ್ಮಗನ ಜೊತೆ ಡಿಕೆ ಶಿವಕುಮಾರ್‌ ಮಗಳ ವಿವಾಹ ಮಾತುಕತೆ!

ಡಿ.ಕೆ.ಶಿವಕುಮಾರ್‌ ಅವರ ಹಿರಿಯ ಪುತ್ರಿ ಐಶ್ವರ್ಯ ಹಾಗೂ ಎಸ್‌.ಎಂ.ಕೃಷ್ಣ ಅವರ ಮೊಮ್ಮಗ, ಕೆಫೆ ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ.ಸಿದ್ಧಾರ್ಥ ಹೆಗ್ಡೆ ಅವರ ಪುತ್ರ ಅಮಾರ್ತ್ಯ ಹೆಗ್ಡೆ ಅವರ ವಿವಾಹ ಬಂಧನ ನಿಶ್ಚಯವಾಗಿದೆ ಎಂದು ಹೇಳಲಾಗುತ್ತಿದೆ.

15 ದಿನಗಳ ಹಿಂದೆ ಕೃಷ್ಣ ನೇತೃತ್ವದಲ್ಲಿ ಉಭಯ ಕುಟುಂಬಗಳ ಹಿರಿಯರು ಮಾತುಕತೆ ನಡೆಸಿದರು. ಈ ವೇಳೆ ಇಬ್ಬರಿಗೂ ಮದುವೆ ಮಾಡುವ ಬಗ್ಗೆ ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾಂಗ್ರೆಸ್ ವಲಯದಿಂದಲಾಗಲೀ ಅಥವಾ ಡಿ.ಕೆ.ಶಿವಕುಮಾರ್ ಆಗಲೀ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಡಿ.ಕೆ ಶಿವಕುಮಾರ್ ಮತ್ತು ಸಿದ್ಧಾರ್ಥ್ ಆತ್ಮೀಯ ಸ್ನೇಹಿತರು ಮಾತ್ರವಲ್ಲ, ಉದ್ಯಮದಲ್ಲಿ ಪಾಲುದಾರರು ಕೂಡ. ಸಿದ್ಧಾರ್ಥ್ ಮಾವ ಅಂದರೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣಾ ಶಿವಕುಮಾರ್ ಗೆ ಹಿಂದೆ ರಾಜಕೀಯ ಗುರುವಾಗಿದ್ದವರು. ಹೀಗಾಗಿ ಎರಡೂ ಕುಟುಂಬಗಳು ಸಂಬಂಧ ಬೆಳೆಸಿಕೊಳ್ಳಲು ನಿಶ್ಚಯಿಸಿದ್ದು, ಇದರ ಭಾಗವಾಗಿ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಿದ್ಧಾರ್ಥ ಅವರು ದುರಂತ ಸಾವಿಗೆ ತುತ್ತಾಗುವ ಮುನ್ನವೇ ಎರಡೂ ಕುಟುಂಬಗಳ ಮಧ್ಯೆ ವಿವಾಹ ಸಂಬಂಧದ ಮಾತುಕತೆ ನಡೆದಿತ್ತು ಎಂದೂ ಹೇಳಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top