fbpx
ಸಮಾಚಾರ

ಮಗುವಿನ ನಿರೀಕ್ಷೆಯಲ್ಲಿದ್ದರು ಚಿರಂಜೀವಿ ಸರ್ಜಾ- ಮೇಘನಾ ದಂಪತಿ

ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ(39) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ನಿನ್ನೆ ಲಘು ಹೃದಯಘಾತದಿಂದಾಗಿ ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೆ ಸಾವನಪ್ಪಿದ್ದಾರೆ.

ನಟ ಚಿರಂಜೀವಿ ಸರ್ಜಾ ಮತ್ತು ನಟಿ ಮೇಘನಾ 2018ರಲ್ಲಿ ಮದುವೆಯಾಗಿದ್ದು, ಮೇಘನಾ ಈಗ 5 ತಿಂಗಳ ಗರ್ಭಿಣಿ. ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಯಾವುದೇ ಸಿನಿಮಾ ಶೂಟಿಂಗ್ ಇಲ್ಲದೆ ಚಿರಂಜೀವಿ ಗರ್ಭಿಣಿ ಪತ್ನಿಯ ಜೊತೆ ಕಾಲಕಳೆಯುತ್ತಾ, ಆರೈಕೆಯಲ್ಲಿ ತೊಡಗಿದ್ದರು. ಮಗುವಿನ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೆ ಇತ್ತೀಚೆಗಷ್ಟೇ ಪುಟ್ಟ ನಾಯಿಮರಿಯೊಂದನ್ನು ತಂದಿದ್ದರು ಚಿರು. ಈ ದಂಪತಿಗಳಿಗೆ ನಾಯಿ ಎಂದರೆ ಒಲವು ಜಾಸ್ತಿಯೇ.

1980 ರಂದು ಆಕ್ಟೋಬರ್​ 17ರಂದು ಬೆಂಗಳೂರಿನಲ್ಲಿ ಜನಿಸಿದ್ದ ಅವರು, ಹಿರಿಯ ನಟ ಶಕ್ತಿ ಪ್ರಸಾದ್ ಅವರ​ ಮೊಮ್ಮಗ ಮತ್ತು ನಟ ಅರ್ಜುನ್​ ಸರ್ಜಾ ಅಳಿಯ. ಬಾಲ್ಡವಿನ್​ ಬಾಲಕರ ಹೈ ಸ್ಕೂಲ್​ನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದರು. ಬಳಿಕ ವಿಜಯ ಕಾಲೇಜಿನಲ್ಲಿ ಪದವಿ ಪಡೆದಿದ್ದರು. ಅಲ್ಲದೇ 4 ವರ್ಷ ಅರ್ಜುನ್​ ಸರ್ಜಾ ಜೊತೆ ಸಹ ನಿರ್ದೇಶಕನಾಗಿ ಕೆಲಸ ನಿರ್ವಹಿಸಿದ್ದರು. ವಾಯುಪುತ್ರ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಚಿರಂಜೀವಿ ಸರ್ಜಾ ಅವರು 22ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top