fbpx
ಸಮಾಚಾರ

ದೇಶದಲ್ಲಿ ಒಂದೇ ದಿನ ದಾಖಲೆಯ 9,983ಮಂದಿಯಲ್ಲಿ ಸೋಂಕು: ಸೋಂಕಿತರ ಸಂಖ್ಯೆ 2,56,611 ಲಕ್ಷಕ್ಕೇರಿಕೆ.

ಕೊರೊನಾ ಸೋಂಕು ಹರಡುವಿಕೆ ಬಹಳ‌ ಕಡಿಮೆ ಇದ್ದಾಗ ಲಾಕ್ಡೌನ್ ಮಾಡಿ, ಸೋಂಕು ಹರಡುವಿಕೆ ತೀವ್ರವಾಗಿರುವಾಗ ಹೆಸರಿಗೆ ಮಾತ್ರ ಲಾಕ್ಡೌನ್ ಜಾರಿಗೊಳಿಸಿದ ಪರಿಣಾಮ ಭಾರತದಲ್ಲಿ ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದಾಖಲೆಯ ಸಂಖ್ಯೆಯಲ್ಲಿ ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದಾಖಲೆಯ 9,983ಮಂದಿಯಲ್ಲಿ ಪಾಸಿಟಿವ್ ಬಂದಿದೆ.

ಕೇವಲ ಒಂದೇ ದಿನದಲ್ಲಿ 9,983 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,56,611 ಲಕ್ಷಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ. ಇದಲ್ಲದೇ ‌ಭಾನುವಾರ ಒಂದೇ ದಿನ ಕೊರೋನಾದಿಂದ 206 ಜನ ಮೃತಪಟ್ಟಿದ್ದು, ದೇಶದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 7 ಸಾವಿರದ ಗಡಿಯನ್ನೂ ದಾಟಿದೆ. ಸದ್ಯ ದೇಶದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 7,135ಕ್ಕೆ ಏರಿಕೆಯಾಗಿದೆ. ಈ ನಡುವೆ ಈ ವರೆಗೂ ಒಟ್ಟು 1,24,095 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನೂ ದೇಶದಲ್ಲಿ 1,25,381 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಇದೇ ರೀತಿ ಮುಂದುವರಿದಿದ್ದೇ ಆದಲ್ಲಿ ಇನ್ನೆರಡು ದಿನಗಳಲ್ಲಿ ಭಾರತವು ಈಗಿರುವ ಐದನೇ ಸ್ಥಾನದಿಂದ ನಾಲ್ಕನೇ ಸ್ಥಾನಕ್ಕೇರಲಿದೆ. ಅಲ್ಲದೇ, ಇನ್ನು ಕೆಲವೇ ದಿನಗಳಲ್ಲಿ ಮೊದಲ ನಾಲ್ಕು ಸ್ಥಾನಗಳಲ್ಲಿರುವ ಅಮೆರಿಕ, ಬ್ರೆಜಿಲ್, ರಷ್ಯಾ ಮತ್ತು ಇಂಗ್ಲೆಂಡ್ ದೇಶಗಳನ್ನು ಹಿಂದಿಕ್ಕುವ ಆತಂಕವೂ ಇದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top