fbpx
ಸಮಾಚಾರ

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸಿಬ್ಬಂದಿಗೆ ಸಂಬಳ ನೀಡಿ “ಇನ್ಮುಂದೆ ನಾನು ಸಂಬಳ ನೀಡಲು ಆಗುತ್ತೋ ಇಲ್ಲವೋ” ಎಂದಿದ್ದ ಸುಶಾಂತ್ ಸಿಂಗ್!

ಬಾಲಿವುಡ್​​ನ ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಮುಂಬೈನ ತಮ್ಮ ಮನೆಯಲ್ಲಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಹಲವಾರು ಬಾಲಿವುಡ್ ಸಿನಿಮಾದಲ್ಲಿ ನಟಿಸಿದ್ದ ಸುಶಾಂತ್ ಸಿಂಗ್ ಸಾವು ಅಭಿಮಾನಿಗಳಿಗೆ ಆಘಾತ ಉಂಟುಮಾಡಿತ್ತು. ಅಲ್ಲದೆ ಈ ಸಾವಿನ ಸುತ್ತ ಸಾಕಷ್ಟು ಅನುಮಾನಗಳು ಕೂಡ ಕಾಡಿದ್ದವು. ಸುಶಾಂತ್ ಸಿಂಗ್ ಆತ್ಮಹತ್ಯೆಗೆ ನಿಖರವಾದ ಕಾರಣ ಬಹಿರಂಗವಾಗಿಲ್ಲವಾದರೂ, ಕಳೆದ ಕೆಲವು ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂಬ ಮಾತು ಕೇಳಿ ಬಂದಿದೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಸದ್ಯ ಪೊಲೀಸರಿಗೆ ಸಿಕ್ಕಿರುವ ಮಾಹಿತಿ ಪ್ರಕಾರ, ತಾವು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮೂರು ದಿನ ಮೊದಲೇ ತಮ್ಮ ಸಿಬ್ಬಂದಿ ಹಾಗೂ ಮನೆಕೆಲಸದವರಿಗೆ ಸಂಬಳ ಹಾಗೂ ಇನ್ನಿತರ ಹಣವನ್ನು ಸಂದಾಯ ಮಾಡಿದ್ದರಂತೆ ಸುಶಾಂತ್!

ಸುಶಾಂತ್ ಆತ್ಮಹತ್ಯೆ ಮಾಡಿಕೊಳ್ಳುವ ಮೂರು ದಿನಗಳ ಮೊದಲೇ ತನ್ನ ಬಳಿ ಕೆಲಸ ಮಾಡುವ ಪ್ರತಿ ಸಿಬ್ಬಂದಿಗಳಿಗೆ ಸಂಬಳ ನೀಡಿದ್ದಾರೆ. ಹಾಗೆ ‘ಇನ್ನುಮುಂದೆ ನಾನು ಸಂಬಳ ನೀಡಲು ಆಗುತ್ತೋ ಇಲ್ಲವೋ’ ಎಂಬ ಮಾತನ್ನು ಹೇಳಿರುವುದಾಗಿ ಒರ್ವ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ ಸಿಬ್ಬಂದಿಗಳಿಗೆ ಈ ಮಾತಿನ ಅರ್ಥ ಇದು ಎಂದು ತಿಳಿದಿರಲಿಲ್ಲ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top