fbpx
ಸಮಾಚಾರ

ನೀರು ಕೇಳಿಬಂದ ಪೌರ ಕಾರ್ಮಿಕರನ್ನು ಕಸದಂತೆ ಕಂಡು ದರ್ಪ ತೋರಿದ ದೌಲತ್ತಿನ ಮಹಿಳೆ: ವಿಡಿಯೋ ವೈರಲ್

ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಕೊರೋನಾ ಮಹಾಮಾರಿ ಅಟ್ಟಹಾಸದ ನಡುವೆಯೂ ತಮ್ಮ ಆರೋಗ್ಯವನ್ನು ಲೆಕ್ಕಿಸದೇ ಸಮಾಜಕ್ಕಾಗಿ ನಿಸ್ವಾರ್ಥವಾಗಿ ದುಡಿಯುವ ಪೌರ ಕಾರ್ಮಿಕರಿಗೆ ಅವಮಾನವಾಗಿದೆ.

 

 

ರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಕೊಸರಾಡಿಕೊಂಡು ಅವರನ್ನು ನಿಂದಿಸಿದ್ದಲ್ಲದೇ ಅಸಹ್ಯಕಾರಿಯಾಗಿ ವರ್ತನೆ ಮಾಡಿದ್ದಾಳೆ., ನಂತರ ಬಾಟಲಿಯಲ್ಲಿ ನೀರು ತುಂಬಿಸಿ ತಂದು ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ನೀರು ಇಡುವಾಗ ಪೌರ ಕಾರ್ಮಿಕರನ್ನು ದೂರ ಹೋಗಿ ಎಂದು ಗದರಿಸಿ ಅಮಾನವೀಯತೆ ಮೆರೆದಿದ್ದಾರೆ.

ಈ ಘಟನೆಯನ್ನು ಸ್ಥಳದಲ್ಲೇ ಇದ್ದ ಕೆಲವರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ ಮಹಿಳೆಯ ಅಮಾನವೀಯತೆಯನ್ನು ಸಾರ್ವಜನಿಕರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಮನೆಯ ಕಸ , ರಸ್ತೆ ಕಸ ಗುಡಿಸಿ ಸ್ವಚ್ಛತೆ ಕಾಪಾಡುವ ಪೌರಕಾರ್ಮಿಕರನ್ನ ಕಸದಂತೆ ನೋಡುವ ಇವರ ಮನಸ್ಥಿತಿ ಕಸಕ್ಕಿಂತಲೂ ಕೀಳಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top