fbpx
ಸಮಾಚಾರ

ಕನ್ನಡದ ಹಿರಿಯ ಹಾಸ್ಯ ನಟ ಮಿಮಿಕ್ರಿ ರಾಜಗೋಪಾಲ್ ನಿಧನ: 650ಕ್ಕೂ ಹೆಚ್ಚು ಸಿನಿಮಾ

ಸುಮಾರು 650 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ನಟ ಮಿಮಿಕ್ರಿ ರಾಜಗೋಪಾಲ್ ಇಂದು ವಿಧಿವಶರಾಗಿದ್ದಾರೆ. ಕಿಡ್ನಿ ಮತ್ತು ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಕೆಂಗೇರಿಯ ಅವರ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 69 ವಯಸ್ಸಾಗಿತ್ತು.

ರಾತ್ರಿ 1.ಗಂಟೆಗೆ ಮನೆಯಲ್ಲೆ ಕೊನೆಯುಸಿರೆಳೆದ ರಾಜ್ ಗೋಪಾಲ್ ಕೆಂಗೇರಿ ಬಳಿಯ ವಲಗರ ಹಳ್ಳಿಯಲ್ಲಿ ಬಿಡಿಎ ನಿರ್ಮಿಸಿರೋ ವಸತಿ ಸಮುಚ್ಚಯದಲ್ಲಿ ವಾಸವಿದ್ದರು. ರಾಜ್ ಗೋಪಾಲ್‌ಗೆ ಮೂರು ಜನ ಹೆಣ್ಣುಮಕ್ಕಳಿದ್ದಾರೆ. ಇಂದು ಮಧ್ಯಾಹ್ನ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಕನ್ನಡ ತಮಿಳು ಸೇರಿದಂತೆ 650 ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿದ್ದಾರೆ. ಫೇಮಸ್ ಅಕ್ರೇಸ್ಟ್ರಾಗಳಲ್ಲಿ ಮಿಮಿಕ್ರಿ ಮಾಡಿ ಹೆಸರು ಮಾಡಿದ್ದ ರಾಜ್ ಗೋಪಾಲ್ ವಿಷ್ಣುವರ್ಧನ್, ಅಂಬರೀಶ್, ಪ್ರಭಾಕರ್ ಹೀಗೆ ಕನ್ನಡ ದೊಡ್ಡ ನಟರ ಜೊತೆ ಅಭಿನಯಿಸಿದ್ದರು. ಕಾಪಿಕಟ್ಟೆ, ರಿಯಲ್ ಪೊಲೀಸ್, ಸಾಧಕರು, ಗೋಸಿ ಗ್ಯಾಂಗ್, ಸೂಪರ್ ಪೊಲೀಸ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top