fbpx
ಸಮಾಚಾರ

ಚಿರು ಸರ್ಜಾ ತಿಂಗಳ ಪುಣ್ಯ ತಿಥಿ: ಚಿರು ಸಮಾಧಿಗೆ ಸೋದರ ಧ್ರುವ ಸರ್ಜಾ ಪೂಜೆ- ಕಣ್ಣೀರಿಟ್ಟ ಕುಟುಂಬಸ್ಥರು

ನಟ ಚಿರಂಜೀವಿ ಸರ್ಜಾ ವಿಧಿವಶರಾಗಿ ಇಂದಿಗೆ ಒಂದು ತಿಂಗಳು. ಈ ಹಿನ್ನೆಲೆ ಕುಟುಂಬ ಸದಸ್ಯರು ಕನಕಪುರದ ನೆಲಗುಳಿಯ ಫಾರ್ಮ್ ಹೌಸ್‍ಗೆ ಭೇಟಿ ಕೊಟ್ಟಿದ್ದಾರೆ. ಚಿರು ಸರ್ಜಾ ಅವರ ಒಂದು ತಿಂಗಳ ಪುಣ್ಯತಿಥಿಯನ್ನು ಕುಟುಂಬಸ್ಥರು ನೆರವೇರಿಸಿದರು.

 

 

View this post on Instagram

 

🙏🙏🙏🙏

A post shared by Vijay Rock (@vijayraj143143) on

 

ಚಿರು ಸಮಾಧಿ ಗೆ ಸೋದರ ಧ್ರುವ ಸರ್ಜಾ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ಅರ್ಜುನ್ ಸರ್ಜಾ, ಮೇಘನಾ ರಾಜ್, ಚಿರು ಅಪ್ಪ, ಅಮ್ಮ ಪೂಜೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಚಿರಂಜೀವಿ ಸರ್ಜಾ ಅವರನ್ನು ನೆನೆದು ಕುಟುಂಬ ಸದಸ್ಯರು ಕಣ್ಣೀರಿಟ್ಟಿದ್ದಾರೆ.

ಕಳೆದ ತಿಂಗಳು ಜೂನ್ 7ರಂದು ಹೃದಯಾಘಾತದಿಂದ ಮೃತಪಟ್ಟ ಚಿರಂಜೀವಿ ಸರ್ಜಾ ಎಲ್ಲರಿಂದ ದೈಹಿಕವಾಗಿ ದೂರವಾಗಿದ್ದಾರೆ. ಆದರೆ ಮಾನಸಿಕವಾಗಿ ತಮ್ಮ ಅಭಿನಯದ ಸಿನಿಮಾ ಮತ್ತು ಹಾಡುಗಳ ಮೂಲಕ ಎಲ್ಲರೊಂದಿಗೇ ಇದ್ದಾರೆ. ಅಣ್ಣ ಸದಾ ನಮ್ಮೊಟ್ಟಿಗೆ ಇರಬೇಕೆಂದು ಕನಕಪುರದ ನೆಲಗುಳಿಯಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಲ್ಲಿ ಧ್ರುವ ಸರ್ಜಾ ಅಣ್ಣ ಚಿರುವಿನ ಅಂತ್ಯಕ್ರಿಯೆ ಮಾಡಿಸಿಕೊಂಡರು.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top