fbpx
ಸಮಾಚಾರ

ಮುತ್ತಪ್ಪ ರೈ ಸಾವಿನ ಬೆನ್ನಲ್ಲೇ ಶುರುವಾಯ್ತು ಆಸ್ತಿ ವಿವಾದ: ಆಸ್ತಿ ಪಾಲು ಕೋರಿ ಕೋರ್ಟ್ ಮೆಟ್ಟಿಲೇರಿದ 2ನೇ ಪತ್ನಿ

ಇತ್ತೀಚೆಗಷ್ಟೇ ಸಾವನ್ನಪ್ಪಿದ್ದ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಸಾವಿನ ಬೆನ್ನಲ್ಲೇ ಆಸ್ತಿ ವಿವಾದ ಶುರುವಾಗಿದೆ. ಹೌದು, ಆಸ್ತಿಯಲ್ಲಿ ಪಾಲು ಕೋರಿ ಮುತ್ತಪ್ಪ ರೈ ಅವರ ದ್ವಿತೀಯ ಪತ್ನಿ ಅನುರಾಧಾ ಅವರು ನಗರದ ಸಿವಿಲ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮುತ್ತಪ್ಪ ರೈ ಅವರು ಸಾಯುವ ಮುನ್ನವೇ ತನ್ನ ಆಸ್ತಿಯ ಬಗ್ಗೆ ವಿಲ್ ಬರೆದು ಇಟ್ಟಿದ್ದರು. ಇದರಲ್ಲಿ ಅವರ ಆಸ್ತಿ ಯಾರಿಗೇ ಸೇರಬೇಕು ಮತ್ತು ಎಷ್ಟು ಸೇರಬೇಕು ಎಂದು ತಿಳಿಸಿದ್ದರು. ಹೀಗಿದ್ದರೂ ಅವರ ಸಾವಿನ ಬಳಿಕ ಅವರ ಎರಡನೇ ಪತ್ನಿ ಅನುರಾಧ ಪಾಲು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಕುರಿತು ಅನುರಾಧಾ ಮುತ್ತಪ್ಪ ರೈ ಸಿವಿಲ್ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ಮುತ್ತಪ್ಪ ರೈ ಪುತ್ರ ರಾಕಿ ಹಾಗೂ ರಿಕ್ಕಿ ಸೇರಿದಂತೆ 17 ಪ್ರತಿವಾದಿಗಳಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನೋಟಿಸ್ ನೀಡಿದೆ. ಅಲ್ಲದೇ ಆಸ್ತಿ ಕುರಿತ ವಿಚಾರಣೆಯನ್ನು ಆಗಸ್ಟ್ 4ಕ್ಕೆ ನಿಗದಿಪಡಿಸಿದೆ.

ಈಗಾಗಲೇ ಎರಡನೇ ಪತ್ನಿ ಅನುರಾಧಾಗೆ ಆಸ್ತಿ ಹಂಚಿಕೆ ಮಾಡಿರುವುದಾಗಿ ಮುತ್ತಪ್ಪ ರೈ ವಿಲ್‍ನಲ್ಲಿ ತಿಳಿಸಿದ್ದರು. ಚಿನ್ನಾಭರಣ, ಕಾರು, ಕೋಟ್ಯಂತರ ರೂಪಾಯಿ ಹಣದ ಜೊತೆ ಹೆಚ್ ಡಿ ಕೋಟೆ ಆಸ್ತಿ, ಜೊತೆಗೆ ಸಹಕಾರ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡವನ್ನು ನಿರ್ಮಿಸಿ ಕೊಡಲಾಗಿದೆ. ಅನುರಾಧಾ ಜೊತೆಗಿದ್ದ ಸಂದರ್ಭದಲ್ಲಿ ಅವರಿಗೆ ಸೇರಬೇಕಾದ ಆಸ್ತಿಯನ್ನು ನೀಡಲಾಗಿದೆ ಎಂದು ವಿಲ್‍ನಲ್ಲಿ ಉಲ್ಲೇಖವಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top