ರಾಜ್ಯದಲ್ಲಿ ಕೊರೊನಾ ಸೋಂಕು ಮಿತಿ ಮೀರಿ ಏರಿಕೆಯಾಗುತ್ತಿದೆ. ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮಂಗಳವಾರ ರಾತ್ರಿ 8 ಗಂಟೆಯಿಂದ ಒಂದು ವಾರಗಳ ಕಾಲ ಬೆಂಗಳೂರು ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸಂಪೂರ್ಣ ಲಾಕ್ಡೌನನ್ನು ಸರ್ಕಾರ ಜಾರಿಗೊಳಿಸಿದೆ. ಇದರ ಮಧ್ಯೆ ಆರೋಗ್ಯ ಇಲಾಖೆ ಮತ್ತೊಂದು ನಿಯಮ ಜಾರಿಗೆ ತಂದಿದೆ.
ಕೊರೋನಾ ವೈರಸ್ ಸೋಂಕಿನ ಪರೀಕ್ಷೆಗೆ ಮಾದರಿ ಕೊಟ್ಟಿರುವ ಜನರಿಗೆ ವರದಿ ಬರುವವರೆಗೂ ಐಸೋಲೇಷನ್/ಕ್ವಾರಂಟೈನ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಉಲ್ಲಂಘನೆ ಮಾಡಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.
COVID 19 ಪರೀಕ್ಷೆಗೆ ಮಾದರಿ ಕೊಟ್ಟಿದ್ದಲ್ಲಿ ಫಲಿತಾಂಶ ಬರುವವರೆಗು ಆ ವ್ಯಕ್ತಿಗಳ ಐಸೊಲೇಷನ್ ಕಡ್ಡಾಯ.
Isolation/Quarantine of persons who have provided sample for COVID 19 testing. pic.twitter.com/j1MQHK03eX
— K'taka Health Dept (@DHFWKA) July 13, 2020
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಸೋವಾರ ಈ ಕುರಿತು ಆದೇಶ ಹೊರಡಿಸಿದ್ದು. ಕೊರೋನಾ ವೈರಸ್ ಸೋಂಕಿನ ಪರೀಕ್ಷೆಗೆ ಮಾದರಿ ಕೊಟ್ಟಿದ್ದಲ್ಲಿ ಫಲಿತಾಂಶ ಬರುವವರೆಗೂ ಆ ವ್ಯಕ್ತಿ ಐಸೋಲೇಷನ್ನಲ್ಲಿರುವುದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದೆ.
ಮಾದರಿ ಕೊಟ್ಟಿರುವ ವ್ಯಕ್ತಿ ಫಲಿತಾಂಶ ಬರುವುದಕ್ಕೂ ಮೊದಲು ಸಾರ್ವಜನಿಕ ಸ್ಥಳದಲ್ಲಿ ಸಂಚಾರ ನಡೆಸುವುದು, ಕಚೇರಿಗೆ ಹೋಗುವುದು, ಅನಗತ್ಯವಾಗಿ ತಿರುಗಾಡುವುದನ್ನು ಮಾಡುವಂತಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ.
ಮಾದರಿ ಕೊಟ್ಟು ಫಲಿತಾಂಶ ಬರುವುದಕ್ಕೂ ಮೊದಲು ವ್ಯಕ್ತಿ ಐಸೋಲೇಷನ್ ನಿಮಯಗಳನ್ನು ಮೀರಿ ಸಂಚಾರ ನಡೆಸಿದರೆ ಸಾಂಕ್ರಾಮಿಕ ರೋಗಗಳ ಕಾಯಿದೆ 1897ರ ಅನ್ವಯ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮಗಳನ್ನಯ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
