fbpx
ಸಮಾಚಾರ

ಭಾರತದಲ್ಲಿ 24 ಗಂಟೆಗಳಲ್ಲಿ 28,498 ಪ್ರಕರಣ: 9 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ

ಕೊರೊನಾ ಸೋಂಕು ಹರಡುವಿಕೆ ಬಹಳ‌ ಕಡಿಮೆ ಇದ್ದಾಗ ಲಾಕ್ಡೌನ್ ಮಾಡಿ, ಸೋಂಕು ಹರಡುವಿಕೆ ತೀವ್ರವಾಗಿರುವಾಗ ಅನ್ ಲಾಕ್ ಜಾರಿಗೊಳಿಸಿದ ಪರಿಣಾಮ ಭಾರತದಲ್ಲಿ ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದಾಖಲೆಯ 28,498 ಮಂದಿಯಲ್ಲಿ ಪಾಸಿಟಿವ್ ಬಂದಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 28,498 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 9 ಲಕ್ಷ ಗಡಿದಾಟಿದೆ. ನಿನ್ನೆ ಒಂದೇ ದಿನ 553 ಮಂದಿ ಕೊರೊನಾಗೆ ಬಲಿ ಆಗಿದ್ದು, ಒಟ್ಟು ಮೃತರ ಸಂಖ್ಯೆ 23,727 ದಾಟಿದೆ.

ದೇಶದಲ್ಲಿ ಕೊರೊನಾ ಕೇಸ್‍ಗಳ ಸಂಖ್ಯೆ ಹೆಚ್ಚಳ ಆಗ್ತಿದ್ದರೂ, ಚೇತರಿಸಿಕೊಳ್ಳುವವರ ಪ್ರಮಾಣವೂ ಹೆಚ್ಚಾಗುತ್ತಿದೆ. 19 ಸಾವಿರ ಮಂದಿ ನಿನ್ನೆ ಸೋಂಕಿನಿಂದ ಚೇತರಿಸಿಕೊಂಡಿದ್ದು, 5,71,459 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಚೇತರಿಕೆ ಪ್ರಮಾಣ 62.5 ರಷ್ಟಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top