fbpx
ಸಮಾಚಾರ

ಪಿಯು ಫಲಿತಾಂಶ ಪ್ರಕಟ- ರಿಸಲ್ಟ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಈ ಭಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. “ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷ ಶೇಕಡಾ 69.20ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕೃತ ಮಾಹಿತಿ ನೀಡಿದ್ದಾರೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮೊದಲ ಸ್ಥಾನ ಸಿಕ್ಕಿದೆ. ಕೊಡಗು, ಉತ್ತರ ಕನ್ನಡ ಜಿಲ್ಲೆಗಳು ಕ್ರಮವಾಗಿ ಎರಡು, ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದರೆ, ವಿಜಯಪುರಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 1,83,725 (ಶೇ.54.55) ಬಾಲಕರು 2,43,572 (ಶೇ.68.73) ಬಾಲಕಿಯರು ತೇರ್ಗಡೆಯಾಗಿದ್ದಾರೆ.

ರಿಸಲ್ಟ್ ನೋಡುವುದು ಹೇಗೆ?
ಅಧಿಕೃತ ವೆಬ್​ಸೈಟ್:​ http://pue.kar.nic.in ಮತ್ತು http://www.karresults.nic.in ಲಾಗ್​ ಆನ್​ ಮಾಡಿ
ಹೋಮ್​ ಪೇಜ್​ನಲ್ಲಿ ‘PUC Results announced on 14/07/2020’ ಕ್ಲಿಕ್​ ಮಾಡಿ
ನಿಗದಿತ ಸ್ಥಳದಲ್ಲಿ ನಿಮ್ಮ ನೋಂದಾಯಿತ ಸಂಖ್ಯೆ ಮತ್ತು ಪಾಸ್​ವರ್ಡ್​ ನಮೂದಿಸಿ
ಸಬ್​ಮಿಟ್​ ಬಟನ್​ ಕ್ಲಿಕ್​ ಮಾಡಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top