fbpx
ಸಮಾಚಾರ

ನಟ ಧ್ರುವ ಸರ್ಜಾ ಮತ್ತು ಪತ್ನಿಗೆ ಕೊರೊನಾ ವೈರಸ್ ಪಾಸಿಟಿವ್: ಆಸ್ಪತ್ರೆಗೆ ದಾಖಲು

ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡು ದುಃಖದಲ್ಲಿರುವ ಸರ್ಜಾ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ನಟ ಧ್ರುವ ಸರ್ಜಾ ಮತ್ತು ಅವರ ಪತ್ನಿ ಪ್ರೇರಣಾ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಕಾಣಿಸಿಕೊಂಡಿದೆ. ಸದ್ಯ ಇಬ್ಬರೂ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ

 

 

ಈ ಬಗ್ಗೆ ಟ್ವೀಟ್ ಮಾಡಿರುವ ಧ್ರುವ, ನನಗೆ ಹಾಗೂ ನನ್ನ ಪತ್ನಿಗೆ ಕೊರೊನಾ ಸೋಂಕು ದೃಢವಾಗಿದೆ. ಸದ್ಯ ಕೊರೊನಾ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿ ಕಂಡು ಬಂದಿದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಶೀಘ್ರವೇ ಗುಣಮುಖರಾಗಿ ಹೊರಬರುತ್ತೇವೆ ಎಂದಿದ್ದಾರೆ.

ಅಲ್ಲದೆ ನಮ್ಮ ಜೊತೆ ಸಂಪರ್ಕದಲ್ಲಿದ್ದವರು ಈ ಕೂಡಲೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top