ಕೋವಿಡ್ 19ಗೆ ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಐಎಎಸ್ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಹೂಗ್ಲಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 33 ವರ್ಷದ ದೇಬದತ್ತ ರೇ ಸೋಮವಾರ ಮೃತಪಟ್ಟಿದ್ದಾರೆ.
ಕೊರೋನಾ ಪಾಸಿಟಿವ್ ಬಂದಿದ್ದರಿಂದ ಅವರು ಹೋಂ ಕ್ವಾರಂಟೈನ್ನಲ್ಲಿದ್ದರು. ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ದೇಬದತ್ತ ಭಾನುವಾರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.
I, on behalf of the Govt of West Bengal, salute her spirit & the sacrifice she’s made in service of the people of #Bengal. Spoke to her husband today & extended my deepest condolences. May the departed soul rest in peace & lord give her family strength to endure this loss. (2/2)
— Mamata Banerjee (@MamataOfficial) July 13, 2020
ರೇ ಅವರು ಪಶ್ಚಿಮ ಬಂಗಾಳ ಮತ್ತು ವಿವಿಧ ರಾಜ್ಯಗಳಿಂದ ಶ್ರಮಿಕ್ ಎಕ್ಸ್ಪ್ರೆಸ್ ರೈಲಿನಲ್ಲಿ ಡಂಕಣಿಗೆ ಆಗಮಿಸಿದ ವಲಸೆ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಕೊರೊನಾ ವಾರಿಯರ್ ಆಗಿ ಕೆಲಸ ಮಾಡುತ್ತಿದ್ದಾಗ ಸೋಂಕು ತಗುಲಿತ್ತು.
ದೇಬದತ್ತ ರಾಯ್ ರವರ ಪತಿಗೂ ಕೊರೊನ ಪಾಸಿಟಿವ್ ಬಂದಿದ್ದು,ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ರಾಯ್ ರವರ ಪತಿಗೆ ಪತ್ರ ಬರೆದು ಸಾಂತ್ವನ ವ್ಯಕ್ತಪಡಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
