fbpx
ಸಮಾಚಾರ

ಕೊರೋನಾ ಸೋಂಕು: ಒಂದೇ ದಿನಕ್ಕೆ ಧ್ರುವ ಸರ್ಜಾ ದಂಪತಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಸ್ಯಾಂಡಲ್​ವುಡ್​ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಅವರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾದ ಒಂದೇ ದಿನದಲ್ಲಿ ಡಿಸ್ಚಾರ್ಜ್​ ಆಗಿದ್ದಾರೆ. 1 ದಿನ ಆಸ್ಪತ್ರೆಲಿದ್ದು ಚಿಕಿತ್ಸೆ ಪಡೆದು ನಿನ್ನೆ ಸಂಜೆ ಮನೆಗೆ ವಾಪಸ್ ಆಗಿದ್ದಾರೆ.

ನಿನ್ನೆ ನಟ ಧ್ರುವ ಸರ್ಜಾ ಮತ್ತು ಅವರ ಪತ್ನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಬಗ್ಗೆ ಖುದ್ದು ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಸದ್ಯ ಈಗ ಆಸ್ಪತ್ರೆಯಿಂದ ನಟ ಧ್ರುವ ಸರ್ಜಾ, ಪ್ರೇರಣಾ ಡಿಸ್ಚಾರ್ಜ್ ಆಗಿದ್ದಾರೆ. ಸಣ್ಣಪುಟ್ಟ ಜ್ವರ ಬಿಟ್ಟರೆ ಬೇರೆ ಲಕ್ಷಣಗಳು ಇರದ ಹಿನ್ನೆಲೆಯಲ್ಲಿ ಧ್ರುವ ಮತ್ತು ಪ್ರೇರಣಾ ಇಬ್ಬರನ್ನೂ ಮನೆಯಲ್ಲಿಯೇ ಕ್ವಾರಂಟೈನ್ ಆಗಲು ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ.

ಸೋಂಕು ತಗುಲಿರುವ ಬಗ್ಗೆ ಟ್ವಿಟರ್​ನಲ್ಲಿ ನಿನ್ನೆ ಮಾಹಿತಿ ಹಂಚಿಕೊಂಡಿದ್ದ ಧ್ರುವ ಸರ್ಜಾ, “ನನ್ನ ಹೆಂಡತಿ ಮತ್ತು ನಾನು ಕೋವಿಡ್​19 ಪರೀಕ್ಷೆ ಮಾಡಿಸಿಕೊಂಡಿದ್ದೇವೆ. ವರದಿ ಪಾಸಿಟಿವ್​ ಬಂದಿದೆ. ಕೊರೊನಾ ಲಕ್ಷಣಗಳು ಸಣ್ಣ ಪ್ರಮಾಣದಲ್ಲಿ ಕಂಡು ಬಂದಿದೆ. ಆದ್ದರಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇವೆ. ಶೀಘ್ರವೇ ಗುಣಮುಖರಾಗಿ ಹೊರಬರುತ್ತೇವೆ ಎಂದಿದ್ದರು. ಅಲ್ಲದೇ ನಮ್ಮ ಜೊತೆ ಸಂಪರ್ಕದಲ್ಲಿದ್ದವರು ಈ ಕೂಡಲೇ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ” ಎಂದು ಮನವಿ ಮಾಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top