fbpx
ಸಮಾಚಾರ

‘ದೇವರೇ ಕಾಪಾಡಬೇಕು’ ಹೇಳಿಕೆ ನೀಡಿದ್ದು ಯಾಕೆ ಅಂತ ವಿವರಿಸಿದ ಅರೋಗ್ಯ ಸಚಿವ ಶ್ರೀರಾಮುಲು

ಕೊರೋನಾದಿಂದ ನಮ್ಮನ್ನು ಆ ದೇವರೇ ಕಾಪಾಡಬೇಕು ಎಂದು ಹೇಳಿಕೆ ನೀಡುವ ಮೂಲಕ ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡುಮಾಡಿದ್ದ ಆರೋಗ್ಯ ಸಚಿವ ಬಿ. ಶ್ರೀರಾಮುಲು ವಿರುದ್ಧ ವಿರೋಧ ಪಕ್ಷಗಳು ಹರಿಹಾಯ್ದಿದ್ದವು. ಸರ್ಕಾರದ ವೈಫಲ್ಯವನ್ನು ಬಹಿರಂಗವಾಗಿ ಒಪ್ಪಿಕೊಂಡಿರುವ ಸಚಿವರ ಸಮೇತ ಇಡೀ ಸರ್ಕಾರದ ಸಚಿವರು ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಡಿಕೆ ಶಿವಕುಮಾರ್ ಆಗ್ರಹಿಸಿದ್ದರು. ತಮ್ಮ ಹೇಳಿಕೆ ತೀವ್ರ ಚರ್ಚೆಗೀಡಾದ ಬೆನ್ನಲ್ಲೇ ಸಚಿವ ಬಿ. ಶ್ರೀರಾಮುಲು ಟ್ವಿಟ್ಟರ್​ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

 

 

“ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಸೋಂಕು ಹೆಚ್ಚಾಗಲು, ಸರ್ಕಾರದ ನಿರ್ಲಕ್ಷ್ಯ, ಮಂತ್ರಿಗಳ ಬೇಜವಾಬ್ದಾರಿ, ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸುವ ಸಂದರ್ಭದಲ್ಲಿ, ಆರೋಪಗಳು ‘ಸತ್ಯಕ್ಕೆ ದೂರವಾದದ್ದು’, ‘ಸೋಂಕು ತಡೆಯಲು ಜನರಲ್ಲಿ ಜಾಗೃತಿ ಬರಬೇಕು, ಸೋಂಕು ತಡೆಯುವಲ್ಲಿ ಇದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಇಲ್ಲಿ ಎಡವಿದರೆ ಪರಿಸ್ಥಿತಿ ಕ್ಲಿಷ್ಟಕರ’ ಎಂದು ಹೇಳುವ ಸಂರ್ಭದಲ್ಲಿ, ‘ಇನ್ನೂ ಎಡವಿದರೆ ದೇವರೇ ಕಾಪಾಡಬೇಕು’ ಎಂದು ಹೇಳಿದ ಎಚ್ಚರಿಕೆಯ ಮಾತುಗಳು ಅವು.” ಎಂದು ರಾಮುಲು ಹೇಳಿದ್ದಾರೆ.

 

 

“ಸರ್ಕಾರ, ನಮ್ಮ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಸಚಿವರುಗಳು ಹಗಲಿರುಳೂ ಕೆಲಸ ಮಾಡುತ್ತಿದ್ದೇವೆ. ಈ ಶತಮಾನದ ಸವಾಲೊಂದನ್ನು ಸಮರ್ಥವಾಗಿ ಎದುರಿಸಿ ಗೆಲ್ಲಲು, ಜನರಿಗಾಗಿ ದುಡಿಯುತ್ತಿದ್ದೇವೆ. ತಪ್ಪಾಗಿ ಅರ್ಥೈಸಲಾದ ಮಾತಿಗೆ ನನ್ನ ಸ್ಪಷ್ಟನೆ.” ಎಂದು ರಾಮುಲು ಹೇಳಿದ್ದಾರೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top