fbpx
ಸಮಾಚಾರ

ವಲಸೆ ಕಾರ್ಮಿಕರ ಬಳಿಕ ಪೊಲೀಸರ ನೆರವಿಗೆ ನಿಂತ ಸೋನು ಸೂದ್

ಲಾಕ್ ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರ ಪಾಲಿಗೆ ನಟ ಸೋನು ಸೂದ್ ಹೀರೋ ಆಗಿದ್ದಾರೆ. ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಿಗೆ ಉಳಿದುಕೊಳ್ಳಲು ತಮ್ಮ ಐಶಾರಾಮಿ ಹೋಟೆಲ್ ಬಿಟ್ಟುಕೊಡುವುದಾಗಿ ಹೇಳಿದ್ದರು. ಅಷ್ಟೇ ಅಲ್ಲದೆ ಮುಂಬೈನಲ್ಲಿ ಸಿಕ್ಕಿ ಹಾಕಿಕೊಂಡಿದ್ದ ವಿವಿಧ ರಾಜ್ಯಗಳ ವಲಸೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಮಾಡುವ ಮೂಲಕ ಮನೆಗಳಿಗೆ ಮರಳಲು ಸಹಾಯ ಮಾಡಿದ್ದಾರೆ.

 

 

ಈ ಹಿಂದೆ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರರಿಗೆ ಆಹಾರ ಮತ್ತು ತವರಿಗೆ ಮರಳಲು ನೆರವು ನೀಡಿದ್ದ ನಟ ಸೋನು ಸೂದ್ ಇದೀಗ ಮಹಾರಾಷ್ಟ್ರದಲ್ಲಿ ಪೊಲೀಸರಿಗೆ ಕೋವಿಡ್19 ರಕ್ಷಣಾ ಪರಿಕರಗಳನ್ನು ನೀಡುವ ಮೂಲಕ ನೆರವಿಗೆ ನಿಂತಿದ್ದಾರೆ. ಮಹಾರಾಷ್ಟ್ರ ಪೊಲೀಸರಿಗೆ 25 ಸಾವಿರ ಫೇಸ್ ಶೀಲ್ಡ್ ಖರೀದಿಸಿ ನೀಡಿದ್ದಾರೆ.

ಈ ಸಂಬಂಧ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‍ಮುಖ್ ಅವರು ಟ್ವೀಟ್ ಮಾಡಿದ್ದು, ನಮ್ಮ ಪೊಲೀಸರಿಗೆ 25 ಸಾವಿರ ಫೇಸ್ ಶೀಲ್ಡ್ ನೀಡಿದ ನಟ ಸೊನು ಸೂದ್ ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ಬರೆದುಕೊಂಡು ಜೊತೆಗಿರುವ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top