fbpx
ಸಮಾಚಾರ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಶಾಂತಮ್ಮ ನಿಧನ

ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಶಾಂತಮ್ಮ ಇಂದು ನಿಧನರಾಗಿದ್ದಾರೆ. ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ 93 ವರ್ಷದ ಹಿರಿಯ ನಟಿ ಇಂದು ಸಂಜೆ 5.30 ಕ್ಕೆ ಕೊನೆಯುಸಿರೆಳೆದಿದ್ದಾರೆ. ಮೈಸೂರಿನ ತಮ್ಮ ಮಗಳ ಮನೆಯಲ್ಲಿ ಶಾಂತಮ್ಮ ವಾಸವಿದ್ದರು.

ಶನಿವಾರ ಎದೆ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೋನಾ ಪರಿಸ್ಥಿತಿ ಕಾರಣ ಮೈಸೂರಿನ ಮಗಳ ಮನೆಯಲ್ಲಿ ಶಾಂತಮ್ಮ ಇದ್ದರು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ ಹಿರಿಯ ನಟಿ ಸಾವನಪ್ಪಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

1956ರಲ್ಲಿ ಚಿತ್ರರಂಗಕ್ಕೆ ಪ್ರವೇಶ ಮಾಡಿದ ಶಾಂತಮ್ಮ ಡಾ.ರಾಜ್, ರಜಿನಿಕಾಂತ್, ವಿಷ್ಣುವರ್ಧನ್, ಅಂಬರೀಶ್, ಸೇರಿದಂತೆ ಸ್ಟಾರ್ ನಟರ ಜೊತೆಗೆ ನಟಿಸಿದ್ದು ಸುಮಾರು 450ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬಹುತೇಕ ಪೋಷಕ ಪಾತ್ರಗಳಾದ ಅಮ್ಮ, ಅಜ್ಜಿ ಪಾತ್ರಗಳಲ್ಲಿ ಕಾಣಿಸಿಕೊಳ್ತಿದ್ರು. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಶಾಂತಮ್ಮ ನಟಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top