fbpx
ಸಮಾಚಾರ

ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಪರಾರಿಯಾಗಿದ್ದ ಪ್ರಕರಣ: ಮೈಸೂರಿನಲ್ಲಿ ಸಿಕ್ಕಿಬಿದ್ದ ‘ಡ್ರೋನ್ ಪ್ರತಾಪ್’ ಪೊಲೀಸರ ವಶಕ್ಕೆ

ಹೋಂ ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ ಆರೋಪದಡಿ ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಮೊಬೈಲ್‌ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದ ‘ಡ್ರೋನ್ ಪ್ರತಾಪ್’ ಮೈಸೂರಿನಲ್ಲಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದ್ದು, ಆತನನ್ನು ಕಸ್ಟಡಿಗೆ ಪಡೆದಿರುವ ತಲಘಟ್ಟಪುರ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.

ಹೈದರಾಬಾದ್‌ನಿಂದ ಬೆಂಗಳೂರಿಗೆ ಆಗಮಿಸಿ ನಿಯಮದ ಪ್ರಕಾರ, ಕ್ವಾರಂಟೈನ್​ನಲ್ಲಿರಬೇಕಿದ್ದ ಪ್ರತಾಪ್, ಎಲ್ಲ ನಿಯಮಗಳನ್ನು ಮೀರಿ ಖಾಸಗಿ ಚಾನೆಲ್‌ ಒಂದಕ್ಕೆ ಸಂದರ್ಶನ ಕೊಡಲು ಹೋಗಿ ಪೇಚಿಗೆ ಸಿಲುಕಿದ್ದ. ನಂತರ ಪೊಲೀಸರು ಎಲ್ಲಿ ಹುಡುಕಿದರೂ ಆತ ಸಿಕ್ಕಿರಲಿಲ್ಲ. ನಂತರ ಆತ ಮೈಸೂರಿನಲ್ಲಿ ಇರುವುದು ತಿಳಿದುಬಂದಿತ್ತು.

ಡ್ರೋಣ್ ಪ್ರತಾಪ್ ಅವರನ್ನು ಬೆಂಗಳೂರಿಗೆ ಕರೆತಂದು ಕ್ವಾರಂಟೈನ್ ಮಾಡಲು ಅಧಿಕಾರಿಗಳು ಸಿದ್ದತೆ ನಡೆಸಿದ್ದಾರೆ. ಆದರೆ ಪ್ರತಾಪ್ ಮಾತ್ರ ತಾವು ಮೈಸೂರಿನಲ್ಲೇ ಕ್ವಾರಂಟೈನ್ ಆಗುವುದಾಗಿ ತಿಳಿಸಿದ್ದಾರೆ. ಮೈಸೂರಿಗೆ ಹೋಗಿರುವ ವಿಶೇಷ ತಂಡ, ಪ್ರತಾಪ್‌ನನ್ನು ಕಸ್ಟಡಿಗೆ ಪಡೆದು ಬೆಂಗಳೂರಿಗೆ ಕರೆತರುತ್ತಿದೆ.

ಬೆಂಗಳೂರಿಗೆ ಬಂದ ನಂತರ, ಪ್ರತಾಪ್‌ ಅವರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ. ಅದರ ಅವಧಿ ಮುಗಿದ ನಂತರವೇ ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top