fbpx
ಸಮಾಚಾರ

ಮತ್ತೊಂದು ಯಡವಟ್ಟು ಮಾಡಿಕೊಂಡ ಪ್ರತಾಪ: ಡ್ರೋಣ್ ವಿಜ್ಞಾನಿ ಬಂಧನಕ್ಕೆ ವಿಶೇಷ ತಂಡ ರಚನೆ

ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದ ಮೇರೆಗೆ ಡ್ರೋನ್‌ ಪ್ರತಾಪ್‌ ವಿರುದ್ಧ ತಲಘಟ್ಟಪುರ ಠಾಣೆಯಲ್ಲಿ ಎರೆಡೆರಡು ಎಫ್‌ಐಆರ್‌ ದಾಖಲಾಗಿದೆ. ಡಾ ಪ್ರಯಾಗ್ ಎಂಬುವವರು ನೀಡಿರುವ ದೂರಿನ ಆಧಾರದ ಮೇಲೆ ಪ್ರತಾಪ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಪ್ರತಾಪ್ ಹೋಂ ಕ್ವಾರಂಟೇನ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಕಂಪ್ಲೆಂಟ್ ದಾಖಲಾಗಿದೆ. ಸೋಂಕಿತ ವ್ಯಕ್ತಿಯೊಬ್ಬರ ಪ್ರಾಥಮಿಕ ಸಂಪರ್ಕಿತನಾಗಿದ್ದ ಡ್ರೋನ್ ಪ್ರತಾಪ್ ನಿಯಮ ಉಲ್ಲಂಘನೆ ಮಾಡಿ ಸಾರ್ವಜನಿಕರ ಸಂಪರ್ಕಕ್ಕೆ ಬಂದಿದ್ದಾರೆ ಎಂದು ಆರೋಪಿಸಲಾಗಿದೆ.

ತಮ್ಮ ಮೇಲಿನ ಆರೋಪಗಳಿಗೆ ಸ್ಪಷ್ಟೀಕರಣ ನೀಡಲು ಪ್ರತಾಪ್‌ ಜುಲೈ 16ರಂದು ಮನೆಯಿಂದ ಹೊರಗೆ ಹೋಗಿ, ಕ್ವಾರಂಟೈನ್‌ ನಿಯಮ ಉಲ್ಲಂಘಿಸಿ ಟಿ.ವಿ ವಾಹಿನಿಗಳ ಚರ್ಚೆ ಮತ್ತು ಸಂದರ್ಶನದಲ್ಲಿ ಭಾಗವಹಿಸಿದ್ದರು. ಜುಲೈ 15ರಂದು ಹೈದರಬಾದ್‌ನಿಂದ ಹಿಂದಿರುಗಿದ್ದ ಪ್ರತಾಪ್‌ ಮರುದಿನವೇ (ಜುಲೈ 16) ಸುದ್ದಿ ವಾಹಿನಿ ಚರ್ಚೆಯಲ್ಲಿ ಭಾಗವಹಿಸಿದ್ದರು. ಇದು ಕ್ವಾರಂಟೈನ್ ನಿಯಮದ ಉಲ್ಲಂಘನೆಯಾಗಿದೆ.

ಕ್ವಾರಂಟೈನ್‌ ನಿಯಮ ಉಲ್ಲಂಘನೆ ಮಾಡಿರುವುದು ಸ್ಥಳಿಯಾಡಳಿತಕ್ಕೆ ಗೊತ್ತಾಗಿದೆ ಎಂದು ತಿಳಿಯುತ್ತಲೇ ಪ್ರತಾಪ್‌ ಮೊಬೈಲ್‌ ಫೋನ್‌ ಸ್ವಿಚ್‌ ಆಫ್‌ ಮಾಡಿದ್ದಾರೆ. ಇದು ಕೂಡ ಕ್ವಾರಂಟೈನ್‌ ನಿಯಮ ಉಲ್ಲಂಘನೆ ಎನಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರತಾಪ್‌ ವಿರುದ್ಧ ರಾಷ್ಟ್ರೀಯ ವಿಪ್ಪತ್ತು ನಿರ್ವಹಣಾ ಕಾಯ್ದೆಯ ಅಡಿಯಲ್ಲಿ ತಲಘಟ್ಟಪುರ ಪೊಲೀಸ್‌ ಠಾಣೆಯಲ್ಲಿ ಪ್ರತಾಪ್‌ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ.

ಆತನ ಮೊಬೈಲ್ ಕೂಡಾ ಸ್ವಿಚ್ ಆಫ್ ಎಂದು ಬರುತ್ತಿದೆ. ಆತನ ಅಪಾರ್ಟ್ ಮೆಂಟ್ ಗೆ ಭೇಟಿ ನೀಡಿದಾಗಲೂ ಆತ ಪತ್ತೆಯಾಗಿರಲಿಲ್ಲ. ಈತ ಮಂಡ್ಯ ಅಥವಾ ಚಿಕ್ಕಮಗಳೂರಿನಲ್ಲಿ ಇದ್ದಾನೆ ಎನ್ನಲಾಗಿದೆ. ಹೀಗಾಗಿ ಪ್ರತಾಪನ ವಿರುದ್ಧ ಎಫ್ ಐಆರ್ ದಾಖಲಿಸಿರುವ ಪೊಲೀಸರು ಪ್ರತಾಪನ ಬಂಧನಕ್ಕೆ ವಿಶೇಷ ತಂಡವೊಂದನ್ನು ರಚಿಸಿ, ಹುಡುಕಾಟ ಆರಂಭಿಸಿದ್ದಾರೆ.

ಸುದ್ದಿ ವಾಹಿನಿಯ ಚರ್ಚೆಯಲ್ಲಿದ್ದ ವೇಳೆಯೇ ಪ್ರತಾಪ್‌ ತಾವು ವಾಹಿನಿಗೆ ಬರಲು ಕ್ವಾರಂಟೈನ್‌ ನಿಯಮಗಳನ್ನು ಮುರಿದಿರುವುದಾಗಿ ಯಾವುದೇ ಅಂಜಿಕೆ ಇಲ್ಲದೇ ಹೇಳಿಕೊಂಡಿದ್ದಾರೆ. ಇದೇ ಹಿನ್ನೆಲೆಯಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ( ಬಿಬಿಎಂಪಿ ) ಪ್ರಕರಣ ದಾಖಲಿಸಿದೆ ಎಂದು ಪ್ರಯಾಗ್‌ ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top