fbpx
ಸಮಾಚಾರ

“ಉಸಿರಾಡಲು ರಂಧ್ರವಿರುವ N-95 ಮಾಸ್ಕ್ ಅಪಾಯಕಾರಿ” ಕೇಂದ್ರದ ಎಚ್ಚರಿಕೆ

ಕೊರೊನಾ ಆತಂಕ ಮತ್ತು ತಡೆಗಾಗಿ ಸಾರ್ವಜನಿಕರು ಮಾಸ್ಕ್ ಧರಿಸುತ್ತಿದ್ದಾರೆ. ಸರ್ಕಾರ ಖುದ್ದು ಫೇಸ್ ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಅದರಂತೆ ಸದ್ಯ ದೇಶದಲ್ಲಿ ವಿವಿಧ ರೀತಿಯ ಫೇಸ್ ಮಾಸ್ಕ್‌ಗಳು ಬಳಕೆಯಲ್ಲಿದ್ದು, ಅವುಗಳಲ್ಲಿ N-95 ಮಾಸ್ಕ್ ಅತ್ಯಂತ ಜನಪ್ರಿಯವಾಗಿವೆ. ಭಾರೀ ಸಂಖ್ಯೆಯಲ್ಲಿ N-95 ಮಾಸ್ಕ್‌ಗಳನ್ನು ಜನ ಖರೀದಿಸಿದ್ದಾರೆ.

ಈ ಮಾಸ್ಕ್ ವೈರಸ್ ಹರಡುವುದನ್ನು ತಡೆಯುವುದಿಲ್ಲ ಮತ್ತು ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ತಡೆಯುವುದಿಲ್ಲ ಎಂದು ರಂದ್ರ ಉಸಿರಾಟಕಾರಕಗಳನ್ನು ಅಳವಡಿಸಿರುವ ಎನ್ -95 ಮಾಸ್ಕ್‌ಗಳನ್ನು ಧರಿಸುವುದರ ವಿರುದ್ಧ ಜನರಿಗೆ ಎಚ್ಚರಿಕೆ ನೀಡುವಂತೆ ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದೆ.

ರಂಧ್ರಗಳಿರುವ N-95 ಮಾಸ್ಕ್ ಧರಿಸುವುದರಿಂದ ಕೊರೊನಾ ವೈರಸ್ ದೇಹದೊಳಗೆ ಸೇರುವುದು ಹಾಗೂ ಸೋಂಕಿತ ವ್ಯಕ್ತಿಯ ದೇಹದಿಂದ ಹೊರಗೆ ಬರುವುದನ್ನು ತಪ್ಪಿಸಲು ಸಾಧ್ಯವಿಲ್ಲ. ರಂಧ್ರಗಳಿರುವ N-95 ಮಾಸ್ಕ್ ಧರಿಸುವುದರಿಂದ ವೈರಸ್ ಹೊರ ಬರುವುದನ್ನು ತಪ್ಪಿಸಲಾಗುವುದಿಲ್ಲ N-95 ಮಾಸ್ಕ್ ಸರಿಯಾದ ಬಳಕೆಗೆ ಮಾರ್ಗಸೂಚಿ ಅಗತ್ಯವಿದೆ ಎಂದು ಹೇಳಿದೆ. ಈ ಮೂಲಕ N-95 ಮಾಸ್ಕ್‌ಗಳ ಬಳಕೆಯನ್ನು ತಡೆಯಲು ಸೂಕ್ತ ಮಾರ್ಗಸೂಚಿಗಳನ್ನು ಜಾರಿಗೊಳಿಸುವಂತೆ ರಾಜೀವ್ ಗರ್ಗ್ ಬರೆದಿರುವ ಪತ್ರದಲ್ಲಿ ಸ್ಪಷ್ಟ ಸೂಚನೆ ನೀಡಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top