fbpx
ಸಮಾಚಾರ

ನಟ ದರ್ಶನ್, ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಹೈಕೋರ್ಟ್ ಗೆ ದೂರು

ಸಂಸದೆ ಶೋಭಾ ಕರಂದ್ಲಾಜೆ, ನಟ ದರ್ಶನ್ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ಕೊಟ್ಟ ವೇಳೆ ಕೇಂದ್ರ ಸರಕಾರ ಕೊರೋನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವಕೀಲೆ ಗೀತಾ ಮಿಶ್ರಾ ಹೈಕೋರ್ಟ್ ಗೆ ದೂರು ಸಲ್ಲಿಸಿದ್ದಾರೆ.

ಮೈಸೂರು ಚಾಮುಂಡಿ ಬೆಟ್ಟದಲ್ಲಿ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಹಾಕದೇ ನಿಯಮ ಉಲ್ಲಂಘನೆ ಮಾಡಿದ್ದಾರೆ. ರೋಲ್ ಮಾಡೆಲ್ ಆಗಿರುವ ಇವರೇ ನೆಲದ ಕಾನೂನು ಸರಿಯಾಗಿ ಪಾಲಿಸಿಲ್ಲ. ವಿಪತ್ತು ನಿರ್ವಹಣಾ ಕಾಯ್ದೆಯಡಿ ಇವರು ಮಾಡಿರುವುದು ಅಪರಾಧವಾಗಿದೆ. ಇವರ ವಿರುದ್ಧ ಈ ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲು ನಿರ್ದೇಶನಕ್ಕೆ ಮನವಿ ಮಾಡಿದ್ದಾರೆ.

ಜನ ಸಾಮಾನ್ಯರಿಗೊಂದು ನಿಯಮ ಹಾಗೂ ಪ್ರಭಾವಿಗಳಿಗೊಂದು ನಿಯಮ ಎಂಬಂತೆ ಭಾವಿಸಿದ್ದಾರೆ. ಹೀಗಾಗಿ ಇವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ನಿಯಮಗಳ ಅನುಸಾರ ಕ್ರಮ ಕೈಗೊಳ್ಳುವಂತೆ ಅರ್ಜಿದಾರರ ಮನವಿ ಮಾಡಿದ್ದಾರೆ.

ದರ್ಶನ್ ಅವರು ಆಷಾಢದ ಮೂರನೇ ಶುಕ್ರವಾರ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಅಸಲಿಗೆ ದೇವಾಲಯದ ಪ್ರವೇಶವನ್ನು ಕೊರೊನಾ ಕಾರಣಕ್ಕೆ ನಿರ್ಭಂಧಿಸಲಾಗಿತ್ತು. ಆ ಸಮಯದಲ್ಲಿ ದರ್ಶನ್ ನಿಯಮ ಉಲ್ಲಂಘನೆ ಮಾಡಿದ್ದರು. ಆಗಲೇ ಈ ವಿಷಯ ಚರ್ಚೆಯಾಗಿತ್ತು.

ನಮಗೆ ಅವಕಾಶ ನೀಡಿಲ್ಲ, ಹೀಗಿರುವಾಗ ಶೋಭಾ ಕರಂದ್ಲಾಜೆ, ದರ್ಶನ್ ಅವರಿಗೆ ಹೇಗೆ ಚಾಮುಂಡಿ ಬೆಟ್ಟ ಪ್ರವೇಶಿಸಲು ಅವಕಾಶ ನೀಡಿದ್ರಿ ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ನಮಗ್ಯಾಕೆ ಈ ತಾರತಮ್ಯ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top