fbpx
ಸಮಾಚಾರ

ಹೊಗಳಿ ಹೊನ್ನಶೂಲಕ್ಕೆ ಏರಿಸಿದ್ರೆ ಸಾಲದು, ಕಾಮೇಗೌಡರಿಗೆ ಒಳ್ಳೆಯ ಚಿಕಿತ್ಸೆ ಕೊಡಿಸಿ” ಹೆಚ್‍ಡಿ ಕುಮಾರಸ್ವಾಮಿ

ಐಸೋಲೇಷನ್ ವಾರ್ಡಿನಲ್ಲಿ ಸರಿಯಾಗಿ ಆರೈಕೆ ಇಲ್ಲದೇ ಅನ್ನಾಹಾರ ತ್ಯಜಿಸಿರುವ ಆಧುನಿಕ ಭಗೀರಥ ಕೆರೆ ಕಾಮೇಗೌಡರಿಗೆ ಸೂಕ್ತ ಚಿಕಿತ್ಸೆ ನೀಡಬೇಕೆಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಕಾಮೇಗೌಡರಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ. ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ರಾಜ್ಯ ಸರಕಾರ ತುರ್ತು ಅವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

 

 

ಮನ್ ಕಿ ಬಾತ್ ನಲ್ಲಿ ಕೂಡ ಪ್ರಧಾನಿಯವರು ಕೊಂಡಾಡಿದ್ದಾರೆ. ಮುಖ್ಯಮಂತ್ರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹೊಗಳಿ ಹೊನ್ನಶೂಲಕ್ಕೆ ಏರಿಸಿದರೆ ಸಾಲದು. ಅನಾರೋಗ್ಯದಿಂದ ಅವರು ಸೋತು ಸುಣ್ಣವಾಗಿರುವಾಗ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸರಕಾರ ಮುಂದಾಗಬೇಕಿದೆ ಎಂದು ಕುಮಾರಸ್ವಾಮಿ ಟ್ವೀಟಿಸಿದ್ದಾರೆ.

ಕಾಮೇಗೌಡರು ಕುರಿ ಕಾಯುತ್ತಲೇ ಸ್ವಂತ ಹಣದಿಂದ ಸುಮಾರು ೧೬ ಕೆರೆ ನಿರ್ಮಿಸುವ ಮೂಲಕ ಪ್ರಧಾನಿ ಮೋದಿ ಅವರ ಮನ್ ಕೀ ಬಾತ್ ನಲ್ಲಿ ಪ್ರಶಂಸೆಗೆ ಒಳಗಾಗಿ ಇಡೀ ದೇಶ ಮಾತ್ರವಲ್ಲ ವಿಶ್ವದಲ್ಲೇ ಹೆಸರುವಾಸಿಯಾಗಿದ್ದರು. ಪ್ರಧಾನಿ ಬಳಿಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೂಡ ಕೆರೆ ಕಾಮೇಗೌಡ ಅವರ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದರು. ಅಲ್ಲದೇ ಅವರ ಕಾರ್ಯಕ್ಕಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೂಚನೆ ನೀಡಿ ಉಚಿತವಾಗಿ ಬಸ್ ಪಾಸ್ ವ್ಯವಸ್ಥೆ ಮಾಡಿಸಲಾಗಿದೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top