fbpx
ಸಮಾಚಾರ

“ಮುನಿರತ್ನ ಅವರಿಗೆ ನಟನಾಗಿ ಶುಭಕೋರಿದ್ದೇನೆ” ಜೆಡಿಎಸ್ ಕಾರ್ಯಕರ್ತರ ಅಸಮಾಧಾನಕ್ಕೆ ಸ್ಪಷ್ಟನೆ ನೀಡಿದ ನಿಖಿಲ್‌ ಗೌಡ

ಖ್ಯಾತ ನಿರ್ಮಾಪಕ ಮುನಿರತ್ನ ಅವರ ಹುಟ್ಟುಹಬ್ಬಕ್ಕೆ ನಟ ಕಮ್ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಶುಭಕೋರಿದ್ದಾರೆ. ಇದಕ್ಕೆ ಜೆಡಿಎಸ್ ಪಕ್ಷದ ಕಾರ್ಯಕರ್ತರೇ ಆಕ್ಷೇಪ ಎತ್ತಿದ್ದಾರೆ. ಕುಮಾರಸ್ವಾಮಿಯವರಿಗೆ ದ್ರೋಹ ಬಗೆದವರಿಗೆ ಶುಭಕೋರಬಾರದಿತ್ತು ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ನಿಖಿಲ್ “ಅನರ್ಹ ಶಾಸಕ ಮುನಿರತ್ನ ಹೆಚ್‌.ಡಿ. ಕುಮಾರಸ್ವಾಮಿ ಅವರಿಗೆ ಏನೇ ದ್ರೋಹ ಬಗೆದಿರಬಹುದು. ಆದರೆ, ನಾನು ಅವರನ್ನು ಓರ್ವ ಚಿತ್ರ ನಿರ್ಮಾಪಕ ಎಂದು ಭಾವಿಸಿ ಅವರ ಹುಟ್ಟುಹಬ್ಬಕ್ಕೆ ಓರ್ವ ನಟನಾಗಿ ಶುಭ ಕೋರಿದ್ದೇವೆ ವಿನಃ ಜನತಾದಳದ ನಾಯಕನಾಗಿ ಅಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

‘ಮುನಿರತ್ನ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಕ್ಕೆ ಹಲವರು ಆಕ್ಷೇಪಿಸಿರುವುದು ನನ್ನ ಗಮನಕ್ಕೆ ಬಂತು. ಕುಮಾರಸ್ವಾಮಿ ಅವರಿಗೆ ದ್ರೋಹ ಬಗೆದವರಿಗೆ ನೀವು ಶುಭಕೋರಬಾರದಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಎಲ್ಲರ ಅಭಿಪ್ರಾಯಗಳನ್ನೂ ಗೌರವಿಸುತ್ತೇನೆ. ನಿರ್ಮಾಪಕನಿಗೆ ನಟನಾಗಿ ನಾನು ಶುಭಕೋರಿದ್ದೇನೇ ಹೊರತು ಯುವ ಜನತಾದಳ ನಾಯಕನಾಗಿ ಅಲ್ಲ’ ಎಂದು ಬರೆದುಕೊಂಡಿದ್ದಾರೆ.

ರಾಜಕೀಯ ಸಂಘರ್ಷಗಳನ್ನು ಮೀರಿ ದೇವೇಗೌಡರು ಮೋದಿ ಅವರಿಗೆ ಶುಭ ಕೋರುತ್ತಾರೆ. ಮೋದಿ ದೇವೇಗೌಡರಿಗೆ ಶುಭ ಕೋರುತ್ತಾರೆ. ಯಡಿಯೂರಪ್ಪನವರು ಕುಮಾರಸ್ವಾಮಿ ಅವರಿಗೆ ಶುಭ ಆಶಿಸುತ್ತಾರೆ. ಕುಮಾರಸ್ವಾಮಿ ಅವರೂ ಶುಭಾರೈಕೆಗಳನ್ನು ತಿಳಿಸುತ್ತಾರೆ. ಇದು ಕರ್ನಾಟಕದ ರಾಜಕೀಯದ ಸತ್ಸಂಪ್ರದಾಯ. ಹೀಗಾಗಿ ನನ್ನ ಶುಭಕೋರಿಕೆಯಲ್ಲಿ ತಪ್ಪಿರದು ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಮುನಿರತ್ನ ರಾಜಕೀಯವಾಗಿ ಕುಮಾರಸ್ವಾಮಿ ಅವರಿಗೆ ಏನೇ ಮಾಡಿರಬಹುದು. ಅವುಗಳಿಗೆ ಕಣದಲ್ಲಿ ಉತ್ತರಿಸುವ ಪ್ರಯತ್ನ ಮಾಡೋಣ. ಅದರಲ್ಲಿ ಎರಡು ಮಾತಿಲ್ಲ. ಕಾರ್ಯಕರ್ತನಾಗಿ, ಯುವ ಜನತಾದಳದ ಮುಂದಾಳುವಾಗಿ ನನ್ನ ದುಡಿಮೆ ಪಕ್ಷಕ್ಕೆ ಮಾತ್ರ ಎಂದು ನಿಖಿಲ್‌ ಕುಮಾರಸ್ವಾಮಿ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

 

ಮುನಿರತ್ನ ಅವರ ಹುಟ್ಟಹಬ್ಬಕ್ಕೆ ಶುಭ ಕೋರಿದ್ದಕ್ಕೆ ಹಲವರು ಆಕ್ಷೇಪಿಸಿರುವುದು ನನ್ನ ಗಮನಕ್ಕೆ ಬಂತು. 'ಕುಮಾರಸ್ವಾಮಿ ಅವರಿಗೆ ದ್ರೋಹ ಬಗೆದವರಿಗೆ…

Nikhil Gowda ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಶುಕ್ರವಾರ, ಜುಲೈ 24, 2020

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top