fbpx
ಸಮಾಚಾರ

ಆನ್‍ಲೈನ್ ಶಿಕ್ಷಣಕ್ಕಾಗಿ ಹಸುವನ್ನು ಮಾರಿದ ರೈತನಿಗೆ ಸೋನು ಸೂದ್ ಸಹಾಯಹಸ್ತ

ಲಾಕ್‌ಡೌನ್‌ ಸಂದರ್ಭದಲ್ಲಿ ವಲಸೆ ಕಾರ್ಮಿಕರ ನೋವಿಗೆ ಸ್ಪಂದಿಸುವ ಮೂಲಕ ಸಮಸ್ತ ಭಾರತೀಯರ ಮನಗೆದ್ದಿರುವ ಬಾಲಿವುಡ್‌ ನಟ ಸೋನು ಸೂದ್‌, ಈಗ ತನ್ನ ಹೆಣ್ಣು ಮಕ್ಕಳ ಆನ್‌ಲೈನ್‌ ಶಿಕ್ಷಣಕ್ಕಾಗಿ ಮೊಬೈಲ್‌ ಕೊಳ್ಳುವುದಕ್ಕಾಗಿ ಸಾಕಿದ ಹಸುವನ್ನೇ ಮಾರಿದ ರೈತನಿಗೂ ಸಹಾಯ ಹಸ್ತ ಚಾಚಿದ್ದಾರೆ.

ಕೋವಿಡ್ 19 ಲಾಕ್‍ಡೌನ್ ಪರಿಣಾಮ ಶಾಲೆಗಳು ಮಕ್ಕಳಿಗೆ ಆನ್‍ಕ್ಲಾಸ್ ಆರಂಭಿಸಿವೆ. ಆದರೆ ಹಿಮಾಚಲ ಪ್ರದೇಶದಲ್ಲಿ ಕಡು ಬಡ ಕುಟುಂಬದ ಕುಲ್ದೀಪ್ ಕುಮಾರ್ ತನ್ನ ಮಕ್ಕಳು ಇತರರಂತೆ ಓದಬೇಕು ಎಂದು ತಾನು ಸಾಕಿದ್ದ ಹಸುವನ್ನೇ ಮಾರಿ 6 ಸಾವಿರ ರೂ. ಕೊಟ್ಟು ಮೊಬೈಲ್ ಖರೀದಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಕುಲ್ದೀಪ್, ನನ್ನ ಮಕ್ಕಳು ಆನ್‍ಲೈನ್ ತರಗತಿಗೆ ಹಾಜರಾಗಲು ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಲು ನನ್ನ ಕೈಯಲ್ಲಿ ಸಾಧ್ಯವಿರಲಿಲ್ಲ. ಹೀಗಾಗಿ ನಾನು ಸಾಕಿದ್ದ ಹಸುವನ್ನು ಮಾರಲು ನಿರ್ಧರಿಸಿದೆ. ಅಲ್ಲದೆ 6 ಸಾವಿರ ರೂಪಾಯಿಗೆ ಹಸುವನ್ನು ಮಾರಿಬಿಟ್ಟೆ ಎಂದು ಹೇಳಿದ್ದರು. ಈ ಸುದ್ದಿ ವ್ಯಾಪಕ ವೈರಲ್ ಆಗಿತ್ತು.

 

 

ಸುದ್ದಿ ಭಾರೀ ವೈರಲ್ ಆಗುತ್ತಿದೆ. ಸದಾ ಮಾನವೀಯತೆಯ ಮೂಲಕ ರಿಯಲ್ ಲೈಫ್‍ನಲ್ಲಿ ಹೀರೋ ಆಗಿರೋ ಬಾಲಿವುಡ್ ನಟ ಸೋನು ಸೂದ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಹೌದು. ಹಸು ಮಾರಿದ ತಂದೆಯ ಸುದ್ದಿಗೆ ಟ್ವೀಟ್ ಮಾಡಿರುವ ಸೋನು ಸೂದ್, ಆನ್‍ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ಮಕ್ಕಳ ತಂದೆಗೆ ವಾಪಸ್ ಕೊಡಿಸುತ್ತೇನೆ. ಸದ್ಯ ನಂಗೆ ಅವರ ಬಗ್ಗೆ ಹೆಚ್ಚಿನ ಮಾಹಿತಿ ಯಾರಾದರೂ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top