fbpx
ಸಮಾಚಾರ

ಶಾಲಾ ಪಠ್ಯದಿಂದ ‘ಟಿಪ್ಪು ಸುಲ್ತಾನ್’, ‘ಹೈದರಾಲಿ’ ಅಧ್ಯಾಯಕ್ಕೆ ಕತ್ತರಿ

ಕರ್ನಾಟಕ ಪಠ್ಯ ಪುಸ್ತಕ ಸೊಸೈಟಿ (ಕೆಟಿಬಿಎಸ್) ಮೈಸೂರು ಇತಿಹಾಸದ ಪ್ರಮುಖ ಭಾಗವಾದ ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಪಠ್ಯವನ್ನು ತೆಗೆದು ಹಾಕಿದೆ, ಕೋವಿಡ್ ಕಾರಣದಿಂದಾಗಿ ಸಮಯದ ಕೊರತೆ ನೆಪವೊಡ್ಡಿ ಮೈಸೂರಿನ ಏಳನೇ ತರಗತಿ ಸಮಾಜ ವಿಜ್ಞಾನ ಪಠ್ಯದ ಐತಿಹಾಸಿಕ ಚರಿತ್ರೆ ಭಾಗದಿಂದ ಟಿಪ್ಪು ಸುಲ್ತಾನ್ ಪಾಠವನ್ನು ಕಿತ್ತು ಹಾಕಲಾಗಿದೆ.

ಕೋವಿಡ್‌–19 ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗುತ್ತಿರುವುದರಿಂದ ಪಠ್ಯಕ್ರಮವನ್ನು ಕಡಿತಗೊಳಿಸುವುದಾಗಿ ಸರ್ಕಾರ ಈ ಹಿಂದೆಯೇ ಘೋಷಿಸಿತ್ತು. ಇದರನ್ವಯ ಕಡಿತಗೊಳಿಸುತ್ತಿರುವ ಅಧ್ಯಾಯಗಳ ಪೈಕಿ ಟಿಪ್ಪು ಸುಲ್ತಾನ್‌ಗೆ ಸಂಬಂಧಪಟ್ಟ ಅಧ್ಯಾಯವೂ ಸೇರಿಕೊಂಡಿದೆ. ಪರಿಷ್ಕೃತ ಪಠ್ಯಕ್ರಮದ ಅಧ್ಯಾಯಗಳನ್ನು ಡಿಎಸ್ಇಆರ್‌ಟಿ ತನ್ನ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಿದ್ದು, 6 ಮತ್ತು 10ನೇ ತರಗತಿಯಲ್ಲಿ ಟಿಪ್ಪುವಿಗೆ ಸಂಬಂಧಿಸಿದ ಅಧ್ಯಾಯಗಳನ್ನು ಪಠ್ಯಕ್ರಮದಲ್ಲಿ ಉಳಿಸಿಕೊಳ್ಳಲಾಗಿದೆ.

ಈ ಹಿಂದೆ ಟಿಪ್ಪು ಪಠ್ಯವನ್ನ ಕೈಬಿಡುವ ವಿಚಾರ ಸಾಕಷ್ಟು ಸುದ್ದಿಯಾಗಿತ್ತು. ಈ ಹಿಂದೆ ಸರ್ಕಾರ ಟಿಪ್ಪು ಪಠ್ಯ ಕೈಬಿಡುವ ವಿಚಾರದ ಪರಿಶೀಲನೆಗೆ ಸಮಿತಿ ರಚನೆ ಮಾಡಿತ್ತು. ಸಮಿತಿ ಟಿಪ್ಪು ಪಠ್ಯವನ್ನ ಉಳಿಸಿಕೊಳ್ಳುವುದು ಸೂಕ್ತ ಎಂದು ಸರ್ಕಾರಕ್ಕೆ ವರದಿ ನೀಡಿತ್ತು. ಅಂತೂ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಟಿಪ್ಪು ಪಠ್ಯ ಕೊನೆಗೂ ಪಠ್ಯ ಪುಸ್ತಕದಿಂದ ರದ್ದಾಗಿದೆ. ಲಾಕ್‌ಡೌನ್‌ನಿಂದಾಗಿ ಈ ಬಾರಿ ಶೇ 30 ರಷ್ಟು ಪಠ್ಯ ರದ್ದುಗೊಳಿಸಲು ಸರ್ಕಾರ ಚಿಂತಿಸಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top