fbpx
ಸಮಾಚಾರ

“ಲಕ್ಷ್ಮಣ ಸವದಿ ಮುಂದಿನ ಸಿಎಂ” ಅಭಿಮಾನಿಗಳಿಂದ ಅಭಿಯಾನ

ಡಿಸಿಎಂ ಲಕ್ಷ್ಮಣ ಸವದಿ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಸವದಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಅಭಿಯಾನ ನಡೆಸುತ್ತಿದ್ದಾರೆ. ಈಗ ಈ ಪೋಸ್ಟ್ ಎಲ್ಲ ಕಡೆ ವೈರಲ್ ಆಗಿದ್ದು, ಈಗ ಬಿಜೆಪಿಯಲ್ಲಿ ಒಳಾಂಗಣ ರಾಜಕೀಯ ನಡೆಯುತ್ತಿದೆಯಾ ಎಂಬ ಅನುಮಾನಗಳು ಮೂಡಿವೆ.

ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿಗಳನ್ನು ಸೃಷ್ಟಿಸಲು ಕ್ಷಣಗಣನೆ ಶುರುವಾಗಿದೆ. ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಂಬ ಬರಹದ ಪೋಸ್ಟ್​ಗಳ ಪೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಾರೆ.

2018ರಲ್ಲಿ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಸೋಲನ್ನು ಅನುಭವಿಸಿದ್ದರು. ಬಳಿಕ ಆಪರೇಷನ್ ಕಮಲದ ಮೂಲಕ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಎಲ್ಲರಿಗೂ ಅಚ್ಚರಿ ಎಂಬಂತೆ ರಾಜ್ಯದ ಉಪ ಮುಖ್ಯಮಂತ್ರಿ ಎಂದು ಘೋಷಣೆ ಬಳಿಕ ಡಿಸಿಎಂ ಸವದಿ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top