ಟೀಮ್ ಇಂಡಿಯಾದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅಪ್ಪನಾಗಿದ್ದಾರೆ. ಮದುವೆಗೂ ಮುನ್ನವೇ ಹಾರ್ದಿಕ್ ಅಪ್ಪನಾಗಿದ್ದಾರೆ ಅನ್ನೋದು ವಿಶೇಷ. ಹಾರ್ದಿಕ್ ಗೆಳತಿ ನತಾಶಾ ಸ್ಟ್ಯಾಂಕೋವಿಕ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ನಮಗೆ ಗಂಡು ಮಗು ಜನಿಸಿದೆ’ ಎಂದು ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ 26 ವರ್ಷದ ಹಾರ್ದಿಕ್ ಪಾಂಡ್ಯ, ಮಗುವಿನ ಕೈ ಹಿಡಿದುಕೊಂಡಿರುವ ಚಿತ್ರವನ್ನೂ ಪ್ರಕಟಿಸಿದ್ದಾರೆ. ಅದರ ಬೆನ್ನಲ್ಲೇ ಅವರಿಗೆ ಅಭಿನಂದನೆಗಳ ಸುರಿಮಳೆ ಹರಿದಿದೆ.
We are blessed with our baby boy ❤️🙏🏾 pic.twitter.com/DN6s7aaZVE
— hardik pandya (@hardikpandya7) July 30, 2020
ಮೇ 31 ರಂದು ಸೋಶಿಯಲ್ ಮೀಡಿಯಾದ ಮೂಲಕ ಹಾರ್ದಿಕ್ ಪಾಂಡ್ಯ ತಾವು ತಂದೆಯಾಗುತ್ತಿರುವ ಬಗ್ಗೆ ರಿವೀಲ್ ಮಾಡಿದ್ದರು. ಈ ಕುರಿತು ಇನ್ಸ್ಟಾದಲ್ಲಿ ಗೆಳತಿ ನತಾಶಾರೊಂದಿಗೆ ಇರುವ ಫೋಟೋವನ್ನು ಪೋಸ್ಟ್ ಮಾಡಿದ್ದ ಪಾಂಡ್ಯ, “ನತಾಶಾ ಮತ್ತು ನಾನು ಒಟ್ಟಿಗೆ ಉತ್ತಮ ಪ್ರಯಾಣವನ್ನು ಹೊಂದಿದ್ದೇವೆ. ಈ ಬಾಂಧವ್ಯ ಮತ್ತಷ್ಟು ಉತ್ತಮಗೊಳ್ಳುವತ್ತ ಹೊರಟಿದ್ದು, ಶೀಘ್ರವೇ ನಮ್ಮ ಜೀವನಕ್ಕೆ ಹೊಸ ಜೀವವನ್ನು ಸ್ವಾಗತಿಸಲು ಉತ್ಸುಕರಾಗಿದ್ದೇವೆ. ನಮ್ಮ ಜೀವನದ ಈ ಹೊಸ ಹಂತಕ್ಕಾಗಿ ರೋಮಾಂಚನಗೊಂಡಿದ್ದು, ನಿಮ್ಮ ಆಶೀರ್ವಾದ ಮತ್ತು ಶುಭಾಶಯಗಳನ್ನು ಕೋರುತ್ತೇವೆ” ಎಂದು ಬರೆದುಕೊಂಡಿದ್ದರು.
ಅಂದಹಾಗೆ ಮಾಡೆಲ್ ಕಮ್ ನಟಿಯಾಗಿರುವ ನತಾಶಾ ಹಾಗೂ ಪಾಂಡ್ಯ, ಸದ್ಯದಲ್ಲೇ ಮದುವೆಯಾಗಲಿದ್ದಾರೆ. ಸೆರ್ಬಿಯಾ ಮೂಲದ ರೂಪದರ್ಶಿ ನತಾಶಾ ಸ್ಟಾಂಕೋವಿಕ್, ಕನ್ನಡದ ದನ ಕಾಯೋನು ಸಿನಿಮಾದಲ್ಲೂ ನಟಿಸಿದ್ದಾರೆ. ಹಾರ್ದಿಕ್ ಮುಂಬರುವ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
