fbpx
ಸಮಾಚಾರ

ರಾಯಣ್ಣ, ಅಬ್ಬಕ್ಕ,ಪ್ರವಾದಿ, ಜೀಸಸ್, ಟಿಪ್ಪು ಪಾಠ ಕಡಿತ ವಿವಾದ: ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಸಚಿವ ಸುರೇಶ್ ಕುಮಾರ್

ಏಸು ಕ್ರಿಸ್ತ, ಪ್ರವಾದಿ ಮುಹಮ್ಮದ್ ಪೈಗಂಬರ್‌, ಟಿಪ್ಪು ಸುಲ್ತಾನ್‌, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕದೇವಿ ಪಠ್ಯವನ್ನು 10 ನೇ ತರಗತಿಯ ಪಠ್ಯದಲ್ಲಿ ಕೈ ಬಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಹುಟ್ಟಿಕೊಂಡಿದ್ದ ಗೊಂದಲಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟನೆ ಕೊಟ್ಟು, ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಕೋವಿಡ್-19 ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಒಂದರಿಂದ ಹತ್ತನೇ ತರಗತಿವರೆಗೆ #ಈ_ವರ್ಷಕ್ಕೆ_ಮಾತ್ರ_ಸೀಮಿತವಾಗಿ‌ ಎಲ್ಲ ವಿಷಯಗಳ ವೈಜ್ಞಾನಿಕ ಪಠ್ಯ ಕಡಿತಕ್ಕೆ ಮುಂದಾಗಿದ್ದು, ಇನ್ನೂ ಶೈಕ್ಷಣಿಕ ವರ್ಷದ ಅವಧಿ ನಿಗದಿಯಾಗದ ಹಿನ್ನೆಲೆಯಲ್ಲಿ ಪಠ್ಯಾಂಶಗಳನ್ನು ಅಂತಿಮಗೊಳಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

“ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ಗಮನಿಸಿದ್ದೇನೆ. ಈ ಶೈಕ್ಷಣಿಕ ವರ್ಷ ಇನ್ನೂ ಪ್ರಾರಂಭವಾಗದಿರುವುದರಿಂದ ನಮಗೆ ಎಷ್ಟು ದಿನಗಳು ದೊರೆಯುತ್ತವೆಂಬುದು ಇನ್ನೂ ಅಸ್ಪಷ್ಟವಾಗಿರುವುದರಿಂದ ಸಿಲೆಬಸ್‍ನ್ನು ಅಂತಿಮಗೊಳಿಸಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ.”

“ಮುಂದಿನ ದಿನಗಳಲ್ಲಿ ಲಭ್ಯ ಅವಧಿಯ ಆಧಾರದ ಮೇಲೆ ಮಾಡಲಾಗುವ ಪಠ್ಯ ಕಡಿತವು ವೈಜ್ಞಾನಿಕವಾಗಿರಲಿದ್ದು, ಯಾವುದೇ ಪಠ್ಯವನ್ನು ಅನಗತ್ಯವಾಗಿ ಕಡಿತ ಮಾಡುವುದಿಲ್ಲ. ಹಾಗಾಗಿ ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲ.”

“ಈ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಾಗಬಹುದಾದ ಬೋಧನಾ ಅವಧಿ, ಸಮೂಹಮಾಧ್ಯಮಗಳು ಅಥವಾ ತಂತ್ರಜ್ಞಾನಾಧಾರಿತ ಬೋಧನೆಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳಬಹುದಾದ ಪಠ್ಯಗಳನ್ನು ಗುರುತಿಸಿ ಇಲಾಖೆಯ ತಂತ್ರಜ್ಞಾನಾಧಾರಿತ ಕಲಿಕಾ ನೀತಿಗನುಗುಣವಾಗಿ ಪಠ್ಯ ಬೋಧನೆಯ ಮಾದರಿಗಳನ್ನು ರಚನೆ ಮಾಡಲು ಇಲಾಖೆ ಇಚ್ಛಿಸಿದ್ದು, ಈ ಎಲ್ಲ ಕ್ರಮಗಳು ಅಂತಿಮಗೊಳ್ಳುವ ಪೂರ್ವದಲ್ಲಿಯೇ ಅಚಾತುರ್ಯದಿಂದ ಇಲಾಖೆಯ ಜಾಲತಾಣದಲ್ಲಿ ಅನುಮೋದಿತವಾಗದ, ಯಾವುದೇ ರೀತಿ ಕಡಿತವಾಗಿಲ್ಲದ ಪಠ್ಯಾಂಶಗಳ ಕುರಿತು ಪ್ರಕಟಿಸಲಾಗಿದೆ.”

#ಇದನ್ನು_ಕೂಡಲೇ_ಹಿಂಪಡೆಯಲು_ಅಧಿಕಾರಿಗಳಿಗೆ_ಸೂಚನೆ_ನೀಡಲಾಗಿದೆ.

“ಇತಿಹಾಸಕ್ಕೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯ, ದಾಖಲೆಯ, ಸಂಗತಿಯ ಐತಿಹ್ಯವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರವು ಸಮಾಜವನ್ನು ಕಟ್ಟುವ ಕೆಲಸ ಮಾಡುತ್ತದೆಯೇ ವಿನಾ ಕೆಡವುವ ಕೆಲಸವನ್ನು ಮಾಡುವುದಿಲ್ಲ. ಇದು ಅನವಶ್ಯಕ ರಾಜಕೀಯ ಗೊಂದಲಗಳಿಗೆ ಅವಕಾಶ ಕಲ್ಪಿಸಬೇಕಿಲ್ಲ‌”

“ಅದೇ ರೀತಿ ನಮಗೆ ಪ್ರೇರಣೆ ತುಂಬುವ ಯಾವುದೇ ಮಹಾನ್ ವ್ಯಕ್ತಿತ್ವ, ಯಾವುದೇ ಸಾಮ್ರಾಜ್ಯ, ಯಾವುದೇ ಐತಿಹಾಸಿಕ ಘಟನೆಗೆ ಎಲ್ಲಾ ರೀತಿಯ ಗೌರವ ನೀಡುವುದು ನಮ್ಮೆಲ್ಲರ ಹೆಮ್ಮೆಯ ಕರ್ತವ್ಯ. ಅದರಲ್ಲಿ ಯಾವುದೇ ಚ್ಯುತಿ ಯಾಗದಂತೆ ನೋಡಿಕೊಳ್ಳುತ್ತೇವೆ.” ಎಂದು ಸುರೇಶ ಕುಮಾರ್ ಅವರು ಹೇಳಿದ್ದಾರೆ

#ಪಠ್ಯ_ಕಡಿತ_ಅಂತಿಮವಾಗಿಲ್ಲ

ಕೋವಿಡ್-19 ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಒಂದರಿಂದ ಹತ್ತನೇ ತರಗತಿವರೆಗೆ #ಈ_ವರ್ಷಕ್ಕೆ_ಮಾತ್ರ_ಸೀಮಿತವಾಗಿ‌…

Suresh Kumar S ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಬುಧವಾರ, ಜುಲೈ 29, 2020

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top