fbpx
ಸಮಾಚಾರ

ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ: ಬಿಎಸ್‌ವೈ ಸರ್ಕಾರದ ವಿರುದ್ಧ ಹೆಚ್‌ಡಿಕೆ ಟೀಕೆ

ಮಾಂಗಲ್ಯ ಅಡವಿಟ್ಟ ಮಕ್ಕಳ ಆನ್‍ಲೈನ್ ಶಿಕ್ಷಣಕ್ಕೆ ವ್ಯವಸ್ಥೆ ಮಾಡಿದ ಮಹಾತಾಯಿಯ ದುಸ್ಥಿತಿ ಕಂಡು ಕಣ್ಣಾಲಿಗಳು ತುಂಬಿ ಬಂದವು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭಾವುಕರಾಗಿದ್ದಾರೆ. ಟ್ವೀಟ್ ಮೂಲಕ ಘಟನೆಗಳು ಮರುಕಳಿಸದಂತೆ ನಮ್ಮ ಸಮಾಜ ಮತ್ತು ಸರ್ಕಾರ ಎಚ್ಚರ ವಹಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡುವ ಮೂಲಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ಕಿವಿ ಹಿಂಡಿದ್ದಾರೆ.

 

 

“ಕೊರೋನಾ ಸೋಂಕು ಜನರ ಜೀವ-ಜೀವನದ ಜೊತೆ ಮಾತ್ರ ಚೆಲ್ಲಾಟ ಮಾಡುತ್ತಿಲ್ಲ. ಇಡೀ ಮನುಕುಲದ ರೀತಿ-ರಿವಾಜುಗಳನ್ನು ಬುಡಮೇಲು ಮಾಡುತ್ತಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ತಾಯಿ ಒಬ್ಬರು ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ. ನಾಲ್ಕು ಮಕ್ಕಳ ಪೈಕಿ 7 ಮತ್ತು 8 ನೇ ತರಗತಿ ಓದುತ್ತಿರುವ ಇಬ್ಬರು ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಮನೆಯಲ್ಲಿ ಟಿವಿ ಇಲ್ಲದ ಕಾರಣ ತಾಳಿಯನ್ನು ಅಡವಿಟ್ಟು ನರಗುಂದ ತಾಲೂಕಿನ ರಡ್ಡೇರ ನಾಗನೂರು ಗ್ರಾಮದ ಕಸ್ತೂರಿ ಎಂಬ ಮಹಾತಾಯಿ ದುಸ್ಥಿತಿ ಕಂಡು ಕಣ್ಣಾಲಿಗಳು ತುಂಬಿ ಬಂದಿವೆ.”

 

 

“ಇಂತಹ ನೂರಾರು ನಿದರ್ಶನಗಳು ಸದ್ದಿಲ್ಲದೆ, ಸುದ್ದಿಯಾಗದೆ ಬಡ ಪೋಷಕರು ಕೊರೊನಾ ಕಾಲದಲ್ಲಿ ಯಮಯಾತನೆ ಅನುಭವಿಸುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನಮ್ಮ ಸಮಾಜ ಮತ್ತು ಸರ್ಕಾರ ಎಚ್ಚರ ವಹಿಸಬೇಕಿದೆ. ಆನ್‍ಲೈನ್ ಶಿಕ್ಷಣದ ಅಪಾಯ ಮತ್ತು ಬಡ ಪೋಷಕರು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಕ್ಷಣವೇ ಸಮಗ್ರ ಯೋಜನೆಯೊಂದನ್ನು ಕಾರ್ಯಗತಗೊಳಿಸಬೇಕು ಎಂದು ಆಗ್ರಹಿಸುತ್ತೇನೆ.” ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

 

 

 

 

ಎನಗೆ ಮನೆ ಇಲ್ಲ , ಎನಗೆ ಧನವಿಲ್ಲ ,
ಮಾಡುವದೇನು? ನೀಡುವದೇನು?
ಮನೆ ಧನ ಸಕಲ ಸಂಪದ ಸೌಖ್ಯವುಳ್ಳ
ನಿಮ್ಮ ಶರಣರ ತಪ್ಪಲಕ್ಕಿಯ ತಂದು,
ಎನ್ನೊಡಲ ಹೊರೆವೇನಾಗಿ,
ಅಮರೇಶ್ವರ ಲಿಂಗಕ್ಕೆ ನೀಡುವ ಬಯಕೆ ಎನಗಿಲ್ಲ ಸಂಗನ ಬಸವಣ್ಣಾ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top