fbpx
ಸಮಾಚಾರ

ಪತ್ನಿ, ಅಳಿಯ ಸೇರಿ ಬಿ.ಸಿ ಪಾಟೀಲ್ ಕುಟುಂಬದ ಐವರಿಗೆ ಕೊರೊನಾ ಸೋಂಕು ದೃಢ

ಕೃಷಿ ಸಚಿವ ಬಿ.ಸಿ.ಪಾಟೀಲ್ ಪತ್ನಿ, ಅಳಿಯ ಹಾಗೂ ಅವರ ನಿವಾಸದ ಸಿಬ್ಬಂದಿ ಸೇರಿ ಒಟ್ಟು ಐವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

 

 

“ನನ್ನ ಶ್ರೀಮತಿ, ಅಳಿಯ ಹಾಗೂ ಹಿರೇಕೆರೂರಿನ ನಿವಾಸದ ಸಿಬ್ಬಂದಿ ವರ್ಗದವರು ಸೇರಿದಂತೆ ಒಟ್ಟು ಐವರಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಅವರನ್ನು ನಿರ್ದಿಷ್ಟವಾದ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗಿದೆ. ಅವರೆಲ್ಲ ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ. ನಿಮ್ಮೆಲ್ಲರ ಹಾರೈಕೆಯೂ ಇರಲಿ. ” ಎಂದು ಬಿಸಿ ಪಾಟೀಲ್ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಹಾವೇರಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಿರೇಕೆರೂರು ತಾಲೂಕಿನಲ್ಲಿ ಸಹ ಕೊರೊನಾ ಪ್ರಕರಣಗಳು ಹೆಚ್ಚು ಕಂಡು ಬಂದಿವೆ. ಜಿಲ್ಲೆಯಲ್ಲಿ ಈ ವರೆಗೆ 935 ಪ್ರಕರಣಗಳು ಪತ್ತೆಯಾಗಿವೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top