fbpx
ಸಮಾಚಾರ

NIRDPR ನೇಮಕಾತಿ: ಒಟ್ಟು 510 ಹುದ್ದೆಗಳಿಗೆ ಅರ್ಜಿ ಅಹ್ವಾನ

 

ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್ ನಲ್ಲಿ ವಿವಿಧ 510 ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಯೋಜನಾ ಸಮನ್ವಯಕಾರರು 10, ಯಂಗ್ ಫೆಲೋ 250, ಕ್ಲಸ್ಟರ್ ಮಟ್ಟದ ಸಂಪನ್ಮೂಲ ವ್ಯಕ್ತಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ

1) ರಾಜ್ಯ ಮಟ್ಟದ ಕಾರ್ಯಕ್ರಮ ಸಂಯೋಜಕರು

ವಿದ್ಯಾರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯದಿಂದ ಸಮಾಜ ಶಾಸ್ತ್ರ, ಎಂಎಸ್‌ಡಬ್ಲ್ಯೂ ಹಾಗೂ ಗ್ರಾಮೀಣಾಭಿವೃದ್ಧಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಹಾಗೂ ಇಂಗ್ಲಿಷ್‌, ಹಿಂದಿಯಲ್ಲಿ ಬರೆಯಲು ಮತ್ತು ಓದಲು ಬರಬೇಕು.

ವೇತನ:
₹ 55,000 ಸೇರಿದಂತೆ ಇತರೆ ಭತ್ಯೆಗಳನ್ನು ನೀಡಲಾಗುವುದು.

ವಯಸ್ಸು:
ಕನಿಷ್ಠ–30, ಗರಿಷ್ಠ–50

2) ಯಂಗ್ ಫೆಲೋ ಹುದ್ದೆಗಳು

ವಿದ್ಯಾರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯದಿಂದ ಸಮಾಜ ಶಾಸ್ತ್ರ, ಎಂಎಸ್‌ಡಬ್ಲ್ಯೂ ಹಾಗೂ ಗ್ರಾಮೀಣಾಭಿವೃದ್ಧಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಹಾಗೂ ಇಂಗ್ಲಿಷ್‌, ಹಿಂದಿಯಲ್ಲಿ ಬರೆಯಲು ಮತ್ತು ಓದಲು ಬರಬೇಕು.

ವೇತನ:
₹ 35,000 ಸೇರಿದಂತೆ ಇತರೆ ಭತ್ಯೆಗಳನ್ನು ನೀಡಲಾಗುವುದು.

ವಯಸ್ಸು:
ಕನಿಷ್ಠ–25, ಗರಿಷ್ಠ–30

3) ಕ್ಲಸ್ಟರ್ ಮಟ್ಟದ ಸಂಪನ್ಮೂಲ ವ್ಯಕ್ತಿ ಹುದ್ದೆಗಳು

ವಿದ್ಯಾರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಹಾಗೂ ಇಂಗ್ಲಿಷ್‌, ಹಿಂದಿಯಲ್ಲಿ ಬರೆಯಲು ಮತ್ತು ಓದಲು ಬರಬೇಕು.

ವೇತನ:
₹ 12,500 ಸೇರಿದಂತೆ ಇತರೆ ಭತ್ಯೆಗಳನ್ನು ನೀಡಲಾಗುವುದು.

ವಯಸ್ಸು:
ಕನಿಷ್ಠ–26, ಗರಿಷ್ಠ 40 ವರ್ಷಗಳನ್ನು ಮೀರಿರಬಾರದು

ಹೆಚ್ಚಿನ ಮಾಹಿತಿಗೆ ಎನ್​ಐಆರ್​ಡಿಪಿ ವೆಬ್​ಸೈಟ್ http://nirdpr.org.in ನೊಡಬಹುದು.

 

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 25-07-2020
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10-08-2020

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top