fbpx
ಸಮಾಚಾರ

ಮೊದಲ ಬಾರಿಗೆ ತಮ್ಮ ಮಗನ ಪೋಟೋ ಹಂಚಿಕೊಂಡ ಹಾರ್ದಿಕ್​ ಪಾಂಡ್ಯ

ಟೀ ಇಂಡಿಯಾ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ತಂದೆಯಾಗಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಇದೀಗ ಹಾರ್ದಿಕ್ ಪಾಂಡ್ಯ ತಮ್ಮ ಮಗುವಿನ ಫೋಟೋವನ್ನು ರಿವೀಲ್ ಮಾಡಿದ್ದಾರೆ.

ಪಾಂಡ್ಯ ಫಿಯಾನ್ಸಿ ನತಾಶಾ ಸ್ಟಾಂಕೋವಿಕ್, ಕಳೆದ ಗುರುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿ, ಸಂತಸ ಹಂಚಿಕೊಂಡಿದ್ದ ಪಾಂಡ್ಯ ಮಗುವಿನ ಕೈ ಬೆರಳು ಹಿಡಿದುಕೊಂಡಿದ್ದ ಪೋಟೋವನ್ನ ಶೇರ್ ಮಾಡಿದ್ದರು. ಈಗ ತಮ್ಮ ಮುದ್ದಾದ ಮಗುವನ್ನ ಎತ್ತಿಕೊಂಡು ಖುಷಿಯಿಂದ ನೋಡುತ್ತಿರುವ ಪೋಟೋವನ್ನ ಪಾಂಡ್ಯ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ

 

 

ಇಂದು ಹಾರ್ದಿಕ್ ಪಾಂಡ್ಯ ತಮ್ಮ ಮಗುವಿನ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ತಮ್ಮ ಮಗನನ್ನು ಎರಡು ಕೈಗಳಿಂದ ಎತ್ತಿಕೊಂಡಿದ್ದು, ಮಗುವಿನ ಮುಖ ನೋಡುತ್ತಾ ಪಾಂಡ್ಯ ನಗುತ್ತಿದ್ದಾರೆ. ಈ ಫೋಟೋಗೆ “ದೇವರಿಂದ ಆಶೀರ್ವಾದ” ಎಂದು ಬರೆದಿದ್ದು, ನಮಸ್ಕಾರ ಮಾಡುವ ಮತ್ತು ಹಾರ್ಟ್ ಎಮೋಜಿಯನ್ನು ಹಾಕಿ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

ಮೇ 31 ರಂದು ಸೋಶಿಯಲ್ ಮೀಡಿಯಾದ ಮೂಲಕ ಹಾರ್ದಿಕ್ ಪಾಂಡ್ಯ ತಾವು ತಂದೆಯಾಗುತ್ತಿರುವ ಬಗ್ಗೆ ರಿವೀಲ್ ಮಾಡಿದ್ದರು. ಈ ಕುರಿತು ಇನ್‍ಸ್ಟಾದಲ್ಲಿ ಗೆಳತಿ ನತಾಶಾರೊಂದಿಗೆ ಇರುವ ಫೋಟೋವನ್ನು ಪೋಸ್ಟ್ ಮಾಡಿದ್ದ ಪಾಂಡ್ಯ, “ನತಾಶಾ ಮತ್ತು ನಾನು ಒಟ್ಟಿಗೆ ಉತ್ತಮ ಪ್ರಯಾಣವನ್ನು ಹೊಂದಿದ್ದೇವೆ. ಈ ಬಾಂಧವ್ಯ ಮತ್ತಷ್ಟು ಉತ್ತಮಗೊಳ್ಳುವತ್ತ ಹೊರಟಿದ್ದು, ಶೀಘ್ರವೇ ನಮ್ಮ ಜೀವನಕ್ಕೆ ಹೊಸ ಜೀವವನ್ನು ಸ್ವಾಗತಿಸಲು ಉತ್ಸುಕರಾಗಿದ್ದೇವೆ. ನಮ್ಮ ಜೀವನದ ಈ ಹೊಸ ಹಂತಕ್ಕಾಗಿ ರೋಮಾಂಚನಗೊಂಡಿದ್ದು, ನಿಮ್ಮ ಆಶೀರ್ವಾದ ಮತ್ತು ಶುಭಾಶಯಗಳನ್ನು ಕೋರುತ್ತೇವೆ” ಎಂದು ಬರೆದುಕೊಂಡಿದ್ದರು.

ಅಂದಹಾಗೆ ಮಾಡೆಲ್​ ಕಮ್ ನಟಿಯಾಗಿರುವ ನತಾಶಾ ಹಾಗೂ ಪಾಂಡ್ಯ, ಸದ್ಯದಲ್ಲೇ ಮದುವೆಯಾಗಲಿದ್ದಾರೆ. ಸೆರ್ಬಿಯಾ ಮೂಲದ ರೂಪದರ್ಶಿ ನತಾಶಾ ಸ್ಟಾಂಕೋವಿಕ್​, ಕನ್ನಡದ ದನ ಕಾಯೋನು ಸಿನಿಮಾದಲ್ಲೂ ನಟಿಸಿದ್ದಾರೆ. ಹಾರ್ದಿಕ್​ ಮುಂಬರುವ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್​ ಪರ ಕಣಕ್ಕಿಳಿಯಲಿದ್ದಾರೆ.

 

 

View this post on Instagram

 

The blessing from God 🙏🏾❤️ @natasastankovic__

A post shared by Hardik Pandya (@hardikpandya93) on

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published.

To Top