fbpx
ಸಮಾಚಾರ

ವಿಡಿಯೋ: ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದ ಬೃಹತ್ ಕ್ರೇನ್ – 11 ಮಂದಿ ದುರ್ಮರಣ

ಏಕಾಏಕಿ ಕ್ರೇನ್ ಕುಸಿದು ಬಿದ್ದ ಪರಿಣಾಮ 11 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. ವಿಶಾಖಪಟ್ಟಣಂನ ಹಿಂದೂಸ್ತಾನ್ ಶಿಪ್‍ಯಾರ್ಡ್ ಲಿಮಿಟೆಡ್‍ನಲ್ಲಿ ಇಂದು ಈ ದುರಂತ ಸಂಭವಿಸಿದೆ.

 

 

ವಿಶಾಖಪಟ್ಟಣಂನ ಹಿಂದೂಸ್ತಾನ್ ಶಿಪ್‌ಯಾರ್ಡ್‌ನಲ್ಲಿ ಈ ಘಟನೆ ನಡೆದಿದ್ದು, ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಕ್ರೇನ್ ಕಾರ್ಮಿಕರ ಮೇಲೆ ಬಿದ್ದಿದೆ. ಘಟನೆ ವೇಳೆ ಸ್ಥಳದಲ್ಲೇ ಐದು ಮಂದಿ ಸಾವನ್ನಪ್ಪಿದ್ದರೆ, ಉಳಿದ ಐದು ಮಂದಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾರೆ.

ದಿನ ನಿತ್ಯದಂತೆಯೇ ಇಂದೂ ಕೂಡ ಶಿಪ್ ಯಾರ್ಡ್ ನಲ್ಲಿ ಲೋಡ್ ಅನ್ ಲೋಡ್ ಕಾರ್ಯ ನಡೆಯುತ್ತಿದ್ದಾಗ ಇದ್ದಕಿದ್ದ ಹಾಗೆ ಕ್ರೇನ್ ಕುಸಿದು ಬಿದ್ದಿದೆ. ಈ ವೇಳೆ ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರು ಕ್ರೇನ್ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ಜಾರೆ. ಪ್ರಸ್ತುತ ಕ್ರೇನ್ ಅವಶೇಷಗಳನ್ನು ತೆರವುಗೊಳಿಸಿ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ಭರದಿಂದ ಸಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top