fbpx
ಸಮಾಚಾರ

ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕರ್ನಾಟಕದ 8 ಮಂದಿಗೆ ಆಹ್ವಾನ: ಇಂತಿದೆ ರಾಜ್ಯದ ವಿಶೇಷ ಆಹ್ವಾನಿತರ ಪಟ್ಟಿ

ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ದಿನಾಂಕ ಸಹ ನಿಗದಿಯಾಗಿದೆ. ಇದೇ ಆಗಸ್ಟ್ 5 ರಂದು ಬೆಳಗ್ಗೆ 8ರಿಂದ ಮಧ್ಯಾಹ್ನ 12ರ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ಇಟ್ಟಿಗೆ ಇಟ್ಟು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಆಯೋಧ್ಯೆಯ ಶ್ರೀರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕರ್ನಾಟಕದ ಎಂಟು ಮಂದಿಗೆ ವಿಶೇಷ ಆಹ್ವಾನ ನೀಡಲಾಗಿದೆ.

ಶಿಲಾನ್ಯಾಸ ಕಾರ್ಯಕ್ರಮಕ್ಕೆ ರಾಜ್ಯದ ವಿಶೇಷ ಆಹ್ವಾನಿತರ ಪಟ್ಟಿ ಇಂತಿದೆ:
1. ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ
2. ಇಸ್ಕಾನ್ ನ ಮಧುಪಂಡಿತ ದಾಸ್
3. ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ
4. ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ
5. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
6. ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ
7. ಸುತ್ತೂರು ಮಠದ ಶ್ರೀಗಳು
8. ಆರ್ಟ್ ಆಫ್ ಲಿವಿಂಗ್ ರವಿಶಂಕರ್ ಗುರೂಜಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top