fbpx
ಸಮಾಚಾರ

ಸಿಎಂ ಬಿಎಸ್​ ಯಡಿಯೂರಪ್ಪ ಮಗಳು ಪದ್ಮಾವತಿ ಆಸ್ಪತ್ರೆಗೆ ದಾಖಲು

ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪಗೆ ಕೊರೋನಾ ಪಾಸಿಟಿವ್​ ಬಂದ ಬೆನ್ನಲ್ಲೇ ಅವರ ಆಪ್ತ ವಲಯದಲ್ಲಿ ಆತಂಕ ಸೃಷ್ಟಿಯಾಗಿದೆ. ಕಳೆದ ಕೆಲ ದಿನಗಳಿಂದ ಅವರ ಸಂಪರ್ಕಕ್ಕೆ ಬಂದವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅಲ್ಲದೆ, ಅವರ ಸಂಪರ್ಕಕ್ಕೆ ಬಂದವರನ್ನು ಹೋಂ ಕ್ವಾರಂಟೈನ್​ ಕೂಡ ಮಾಡಲಾಗುತ್ತಿದೆ. ಈ ಮಧ್ಯೆ ಬಿಎಸ್​ವೈ ಮಗಳಿಗೆ ಪಾಸಿಟಿವ್​ ಬಂದಿದೆ.

ನಿನ್ನೆ ಕಾವೇರಿ ನಿವಾಸಲ್ಲಿರುವವರನ್ನು ಚೆಕ್ ಅಪ್ ಮಾಡುವ ವೇಳೆ ಕೊರೋನಾ ಟೆಸ್ಟ್ ಮಾಡಿಸಲಾಗಿದೆ. ಇದರಲ್ಲಿ ಬಿಎಸ್​​ವೈ ಹಾಗೂ ಅವರ ಪುತ್ರಿ ಪದ್ಮಾವತಿಗೆ ಪಾಸಿಟಿವ್ ಬಂದಿದೆ. ಸಿಎಂ ಹಾಗೂ ಪದ್ಮಾವತಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಭಾನುವಾರ ರಾತ್ರಿ ನಡೆಸಿದ ಪರೀಕ್ಷೆ ವೇಳೆ ಪದ್ಮಾವತಿ ಅವರಿಗೂ ಸೋಂಕು ತಗುಲಿರುವುದು ಪತ್ತೆಯಾಗಿದೆ. ಅವರನ್ನೂ ಸಹ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ್ ಆಸ್ಪತ್ರೆಯ 5ನೇ ಮಹಡಿಯ ವಿಶೇಷ ವಾರ್ಡ್ ನಲ್ಲಿ ಸಿಎಂ ಯಡಿಯೂರಪ್ಪ ದಾಖಲಾಗಿದ್ದು, ಪಕ್ಕದ ವಿಶೇಷ ವಾರ್ಡ್ ನಲ್ಲಿ ಪುತ್ರಿ ಪದ್ಮಾವತಿ ಅವರು ದಾಖಲಾಗಿದ್ದಾರೆ. ಪುತ್ರಿ ಪದ್ಮಾವತಿ ಅವರೇ ತಂದೆಯ ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಅಲ್ಲದೆ ಪದ್ಮಾವತಿ ಅವರು ಫೋನ್ ಮೂಲಕ ಕುಟುಂಬದವರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

ಭಾನುವಾರ ಟ್ವೀಟ್​ ಮಾಡಿದ್ದ ಬಿಎಸ್​ವೈ ತಮಗೆ ಕೊರೋನಾ ಪಾಸಿಟಿವ್​ ಇರುವುದಾಗಿ ಹೇಳಿಕೊಂಡಿದ್ದರು. “ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top