fbpx
ಸಮಾಚಾರ

ವಿಚಾರಣೆ ವೇಳೆ ಅಧಿಕಾರಿಗಳ ಖಡಕ್ ಪ್ರಶ್ನೆಗಳಿಗೆ ಕಕ್ಕಬಿಕ್ಕಾಯಾದ ಫೇಕ್ ವಿಜ್ಞಾನಿ ಡ್ರೋನ್ ಪ್ರತಾಪ್

ವಿಶೇಷ ಡ್ರೋನ್ ತಯಾರಿಸಿದ್ದಾಗಿ ಸುಳ್ಳು ಹೇಳಿಕೊಂಡು ಓಡಾಡಿದ್ದ ಪ್ರತಾಪ್ ಈಗ ಎಲ್ಲರ ಮುಂದೆ ಬೆತ್ತಲಾಗಿದ್ದಾನೆ. ಪ್ರತಾಪನ ‘ಸಾಹಸ’ ಕಂಡು ಯಾರೆಲ್ಲಾ ಈತನನ್ನು ಹೊಗಳಿ ಹಟ್ಟಕ್ಕೇರಿಸಿದ್ದರೋ ಅವರೇ ಇದೀಗ ಛೀಮಾರಿ ಹಾಕುವಂಥ ಪರಿಸ್ಥಿತಿ ಎದುರಿಸುತ್ತಿದ್ದಾನೆ. ಸರ್ಕಾರದ ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದಡಿ ಡ್ರೋನ್ ಪ್ರತಾಪ್ ವಿರುದ್ಧ ಬೆಂಗಳೂರಿನ ಅಶೋಕ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಬೆಂಗಳೂರಿನ ರಿಚ್ಮಂಡ್ ವೃತ್ತದ ಬಳಿ ಇರುವ ಸ್ಟಾರ್‌ ಹೋಟೆಲ್‌ನಲ್ಲಿ ಎನ್. ಎಂ. ಪ್ರತಾಪ್‍ರನ್ನು ಜುಲೈ 20ರಂದು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಸಿಲಾಗಿತ್ತು. ಅವರ ಕ್ವಾರಂಟೈನ್ ಅವಧಿ, ಆಗಸ್ಟ್‌ 3ಕ್ಕೆ ಮುಗಿಯುತ್ತಿತ್ತು. ಅದಕ್ಕೂ ಮುನ್ನ ವಕೀಲರನ್ನು ಹೋಟೆಲ್‍ಗೆ ಕರೆಸುವ ಮೂಲಕ ಪ್ರತಾಪ್‌ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಆತನ ಮೇಲೆ ಕೇಸ್‌ ದಾಖಲಿಸಿದ್ದಾರೆ.

ಈ ಹಿಂದೆ ಕ್ವಾರಂಟೈನ್‍ನಲ್ಲಿ ಇರಬೇಕು ಎಂದು ಅಧಿಕಾರಿಗಳು ಹೇಳಿದ್ದರು ಪ್ರತಾಪ್ ನಿಯಮ ಉಲ್ಲಂಘನೆ ಮಾಡಿದ್ದ. ಆದ್ದರಿಂದ ಆತನ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ಆತನನ್ನು ವಶಕ್ಕೆ ಪಡೆದು ಬೆಂಗಳೂರಿನ ಖಾಸಗಿ ಹೋಟೆಲ್‍ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಪ್ರತಾಪ್ ಕ್ವಾರಂಟೈನ್ ಅವಧಿ ಮುಗಿಯುತ್ತಿದ್ದ ಕಾರಣ ತಲಘಟ್ಟಪುರ ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು. ಆದರೆ ಖಾಸಗಿ ಹೋಟೆಲ್‍ನಲ್ಲಿ ಕ್ವಾರಂಟೈನ್‍ನಲ್ಲಿ ಇದ್ದ ಪ್ರತಾಪ್ ಇನ್ನೊಂದು ಎಡವಟ್ಟು ಮಾಡಿದ್ದು, ಹೋಟೆಲ್‍ಗೆ ಲಾಯರ್ ಒಬ್ಬರನ್ನು ಕರೆಸಿ ಮಾತಾಡಿದ್ದ. ಹೀಗಾಗಿ ಆತನ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು, ಅಶೋಕ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ವಿಚಾರಣೆಗೆ ಅಧಿಕಾರಗಳ ಡ್ರೋನ್ ಪ್ರತಾಪ್ ಸ್ಪಂದಿಸುತ್ತಿಲ್ಲ. ಕ್ವಾರಟೈನ್ ನಲ್ಲಿ ಇದ್ದಾಗ ವೈದ್ಯರು ಕಿರುಕುಳ ನೀಡಿದ್ದಾರೆ‌. ನನ್ನ ಜೊತೆ ಸಭ್ಯ ರೀತಿಯಲ್ಲಿ ನಡೆದುಕೊಂಡಿಲ್ಲ. ನನಗೆ ಸರಿಯಾದ ಸೌಲಭ್ಯ ನೀಡದೇ ಕಿರುಕುಳ ನೀಡಿದ್ದಾರೆ ಎಂದು ಪ್ರತಾಪ್ ಆರೋಪ ಮಾಡಿದ್ದಾರೆ.

ಅಧಿಕಾರಿಗಳ ಪ್ರಶ್ನೆಗೆ ಸರಿಯಾಗಿ ಉತ್ತರಿಸದ ಪ್ರತಾಪ್, ಕ್ವಾರಂಟೈನ್​ನಲ್ಲಿ ವೈದ್ಯರು ನನ್ನೊಂದಿಗೆ ಸಭ್ಯ ರೀತಿಯಲ್ಲಿ ನಡೆದುಕೊಳ್ಳಲಿಲ್ಲ. ಸರಿಯಾದ ಸೌಲಭ್ಯ ನೀಡದೆ ಕಿರುಕುಳ ನೀಡಿದ್ದಾರೆ. ತಪಾಸಣೆಗೆ ಬಂದ ವೈದ್ಯರು ನನ್ನ ವೈಯಕ್ತಿಕ ವಿಚಾರ ಇಟ್ಟುಕೊಂಡು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ. ಅಲ್ಲದೆ ವೈದ್ಯರ ವಿರುದ್ಧ ದೂರು ನೀಡಲು ಚಿಂತನೆ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ.

ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಸಿವಿಲ್ ಡಿಫೆನ್ಸ್ ಕಮಾಂಡೆಂಟ್ ಚೇತನ್ ಕುಮಾರ್​​, ಡ್ರೋನ್​​ ಪ್ರತಾಪ್​​ ಹೋಮ್​​ ಕ್ವಾರಂಟೈನ್​​ ನಿಯಮ ಉಲ್ಲಂಘಿಸಿ ಯಾವುದೇ ಟಿವಿ ಕಾರ್ಯಕ್ರಮಕ್ಕೆ ಹೋಗಿದ್ದರು. ಹಾಗಾಗಿ ಇವರನ್ನು ಬಂಧಿಸಿ ಸ್ಟಾರ್​​ ಹೋಟೆಲ್​​ವೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್​​ ಮಾಡಿದ್ದೆವು. ಹೋಟೆಲ್​​​ನಲ್ಲಿ ಕ್ವಾರಂಟೈನ್​​ ಆದಾಗಲೂ ಇವರು ನಿಯಮ ಉಲ್ಲಂಘನೆ ಮಾಡಿದ್ದಾರೆ. ಆದ್ದರಿಂದ ಅಶೋಕ ನಗರ ಪೊಲೀಸ್​ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದ್ದೇವೆ ಎಂದರು.

ಅಂದಹಾಗೆ ಡ್ರೋನ್ ಪ್ರತಾಪ್ ಕಳೆದ ತಿಂಗಳು ಜುಲೈ 15 ರಂದು ಹೈದರಾಬಾದ್​​ನಿಂದ ಬೆಂಗಳೂರಿಗೆ ಬಂದಿದ್ದ. ಹೊರ ರಾಜ್ಯದಿಂದ ಬಂದ ಹಿನ್ನೆಲೆಯಲ್ಲಿ ನಗರದ ತಲಘಟ್ಟಪುರದ ಅಪಾರ್ಟ್ ಮೆಂಟ್​ವೊಂದರಲ್ಲಿ ಪ್ರತಾಪ್ ಹೋಂ ಕ್ವಾರಂಟೈನ್ ಆಗಿದ್ದ. ನಿಯಮದ ಪ್ರಕಾರ ಆತ 14ದಿನಗಳ ಕಾಲ ಕ್ವಾರಂಟೈನ್​ ಆಗಬೇಕಿತ್ತು. ಆದರೆ, ಕ್ವಾರಂಟೈನ್ ಆದ ಮರುದಿನವೇ ಖಾಸಗಿ ಚಾನೆಲ್​ನ ಸಂದರ್ಶನದಲ್ಲಿ ಪ್ರತಾಪ್ ಪಾಲ್ಗೊಂಡಿದ್ದ. ಹೀಗಾಗಿ ಪಶುವೈದ್ಯ ಹಾಗೂ ವಿಧಿ ವಿಜ್ಞಾನ ತಜ್ಞ ಡಾ.ಎಚ್.ಎಸ್.ಪ್ರಯಾಗ್ ತಲಘಟ್ಟಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಾಗುತ್ತಿದ್ದಂತೆ ಡ್ರೋನ್ ಪ್ರತಾಪ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದ. ನಂತರ ಪ್ರತಾಪ್ ಮೈಸೂರಿನಲ್ಲಿರುವುದನ್ನು ತಿಳಿದು ವಿಶೇಷ ತಂಡ ಮೈಸೂರಿಗೆ ತೆರಳಿತ್ತು. ಅಲ್ಲಿ ಆತನನ್ನು ವಶಕ್ಕೆ ಪಡೆದು ಜುಲೈ 20ರಂದು ಆತನನ್ನು ಬೆಂಗಳೂರಿಗೆ ಕರೆ ತಂದು ಕೆಂಗೇರಿಯ ಖಾಸಗಿ ಹೋಟೆಲ್‍ನಲ್ಲಿ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಲಾಗಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top