fbpx
ಸಮಾಚಾರ

“ಅಯೋಧ್ಯೆಯಲ್ಲಿ ನಿರ್ಮಾಣವಾಗುವ ರಾಮನ ವಿಗ್ರಹಕ್ಕೆ ಮೀಸೆ ಬೇಕೇ ಬೇಕು” ಹಿಂದುತ್ವ ನಾಯಕ ಸಂಭಾಜಿ ಭಿಡೆ ಒತ್ತಾಯ

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದಲ್ಲಿ ಇರಿಸುವ ರಾಮ ಮತ್ತು ಲಕ್ಷ್ಮಣರ ಮೂರ್ತಿಗೆ ಕಡ್ಡಾಯವಾಗಿ ಮೀಸೆ ಇರತಕ್ಕದ್ದು ಎಂದು ಹಿಂದೂ ಮುಖಂಡ ಸಂಭಾಜಿ ಭಿದೆ ಆಗ್ರಹಿಸಿದ್ದಾರೆ. ಅವರ ಹೇಳಿಕೆ ಈಗ ದೇಶದ ಗಮನಸೆಳೆದಿದ್ದು, ನಾನಾ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿವೆ.

ಬುಧವಾರ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಶಿಲಾನ್ಯಾಸ ನಡೆಯಲಿದೆ. ಭೂಮಿ ಪೂಜೆಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮೊದಲು ಹನುಮಂತನ ದೇವಾಲಯಕ್ಕೆ ತೆರಳಿ ಆಂಜನೇಯನಿಗೆ ಪೂಜೆ ಮಾಡಲಿದ್ದಾರೆ.

ಈ ಸಂಬಂಧ ಈಗಾಗಲೇ ಶ್ರೀರಾಮಂದಿರ ಟ್ರಸ್ಟ್ ನ ಗೋವಿಂದಗಿರಿ ಜೀ ಮಹಾರಾಜ್ ಜೊತೆ ಮಾತನಾಡಿ, ನೀವು ಸ್ಥಾಪಿಸುವ ರಾಮ ಹಾಗೂ ಲಕ್ಷ್ಣಣ ಪ್ರತಿಮೆಗಳಿಗೆ ಮೀಸೆ ಇರಬೇಕು. ಒಂದು ವೇಳೆ ನೀವು ರಾಮ-ಲಕ್ಷ್ಮಣ ವಿಗ್ರಹಗಳಿಗೆ ಮೀಸೆ ಇಟ್ಟಿಲ್ಲವೆಂದರೆ, ನನ್ನಂತಹ ಭಕ್ತರಿಗೆ ದೇವಾಲಯ ನಿರ್ಮಿಸಿದರೂ ಪ್ರಯೋಜನವಿಲ್ಲದಂತಾಗುತ್ತದೆ ಎಂದು ಸಂಭಾಜಿ ಭಿಡೆ ಹೇಳಿದ್ದಾರೆ,.

ಅಲ್ಲದೇ ಮಂದಿರಕ್ಕೆ ಭೂಮಿಪೂಜೆ ಮಾಡುವ ಮೊದಲು ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು ಎಂದು ಹೇಳಿರುವ ಸಂಭಾಜಿ ಭಿಡೆ ಆಗಸ್ಟ್ 5ರಂದು ನಡೆಯುವ ಕಾರ್ಯಕ್ರಮವನ್ನು ದಸರಾ, ದೀಪಾವಳಿ ಹಬ್ಬಗಳಂತೆ ಎಲ್ಲರೂ ಆಚರಿಸೋಣ ಎಂದು ಕರೆ ನೀಡಿದರು.

ಶ್ರೀ ಶಿವ ಪ್ರತಿಷ್ಠಾನ್‌ ಹಿಂದೂಸ್ತಾನ್‌ ಎಂಬ ಸಂಘಟನೆಯ ಮುಖ್ಯಸ್ಥರಾಗಿರುವ ಸಂಭಾಜಿ ಭಿಡೆ ಖಟ್ಟರ್‌ ಹಿಂದುತ್ವವಾದಿಯಾಗಿದ್ದಾರೆ. ಈ ಹಿನ್ನೆಲೆ ಧಾರ್ಮಿಕ ಕಾರ್ಯಕ್ರಮಗಳನ್ನ ನಡೆಸುತ್ತಿರುತ್ತಾರೆ. ವಿವಾದಗಳನ್ನು ಆಗಾಗೆ ಮೈಮೇಲೆ ಎಳೆದುಕೊಳ್ಳುತ್ತಿರುತ್ತಾರೆ. ಭೀಡೆ ಕೂಡ ದೊಡ್ಡ ಮೀಸೆಯನ್ನ ಹೊಂದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top